ಚುನಾವಣೋತ್ತರ ಸಮೀಕ್ಷೆಗೆ ಕಾಂಗ್ರೆಸ್ ಅಸಮಧಾನಗೊಂಡಿದ್ದು, ಯಾವುದೇ ಕಾರಣಕ್ಕೂ ಸಮೀಕ್ಷೆಯನ್ನು ಒಪ್ಪುವುದಿಲ್ಲ ಎಂದು ಹೇಳಿದೆ.
ಚುನಾವಣೋತ್ತರ ಸಮೀಕ್ಷೆ ಕುರಿತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದು, ಈ ಸಮೀಕ್ಷೆಗಳು ವಾಸ್ತವಕ್ಕೆ ಹತ್ತಿರವಾಗಿಲ್ಲ. ನರೇಂದ್ರ ಮೋದಿಯವರು ಅಭಿವೃದ್ಧಿಪರ ಆಡಳಿತ ಕೊಡಲಿಲ್ಲ. ಮೋದಿಯವರು ಪ್ರಚಾರದಲ್ಲೇ ಆಡಳಿತ ಮಾಡಿದ್ದಾರೆ.
ಸಾಕಷ್ಟು ಸಮಸ್ಯೆಗಳಿದ್ರೂ ಅವರಿಗೆ ಇಷ್ಟೊಂದು ಅಂಕಿ ಸಂಖ್ಯೆ ತೋರಿಸ್ತಿರೋದು ಆಶ್ಚರ್ಯವಾಗಿದೆ ಎಂದರು.
ಎಷ್ಟೋ ಎಕ್ಸಿಟ್ ಪೋಲ್ ಗಳು ನಿಜವಾಗಲ್ಲ. ಮೊನ್ನೆ ಆಸ್ಟ್ರೇಲಿಯದಲ್ಲೂ ಯಾವುದೇ ಎಕ್ಸಿಟ್ ಪೋಲ್ ಸಮೀಕ್ಷೆಗಳು ನಿಜ ಹೇಳಲಿಲ್ಲ.
ಚುನಾವಣೋತ್ತರ ಸಮೀಕ್ಷೆಗಳು ತಪ್ಪು ಅಥವಾ ಸುಳ್ಳು ಅಂತ ಹೇಳಲ್ಲ. ಕರ್ನಾಟಕದಲ್ಲಿ ಈ ಸಮೀಕ್ಷೆಗಳು ತೋರಿಸಿರುವುದಕ್ಕಿಂತ ಹೆಚ್ಚು ಸ್ಥಾನಗಳನ್ನು ನಾವು ಪಡೆಯುತ್ತೇವೆ ಎಂದರು. ರಾಜ್ಯದಲ್ಲಿ ತೋರಿಸಿರುವುದಕ್ಕಿಂತಲೂ ಹೆಚ್ಚು ಸೀಟು ಗೆಲ್ತೇವೆ.
ಎರಡೂ ಪಕ್ಷಗಳು ಇನ್ನೂ ಚೆನ್ನಾಗಿ ಕೆಲಸ ಮಾಡಿದ್ರೆ ಇನ್ನೂ ಹೆಚ್ಚಾಗಿ ಸೀಟುಗಳನ್ನು ಗೆಲ್ಲಬಹುದಿತ್ತು. ಈ ಸಮೀಕ್ಷೆಗಳನ್ನು ನಾನು ಒಪ್ಪಲ್ಲ. 23 ರ ತನಕ ಕಾಯೋಣ.
ಆವತ್ತು ನಿಜವಾದ ಸಮೀಕ್ಷೆ ಬರುತ್ತೆ. ನಾವು ರಾಜ್ಯದಲ್ಲೂ, ದೇಶದಲ್ಲೂ ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸ ಇದೆ ಎಂದರು.