Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರ್ ನಿಂದ ದಾಳಿ ಮಾಡಿದ ದುಷ್ಕರ್ಮಿಗಳು

ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರ್ ನಿಂದ ದಾಳಿ ಮಾಡಿದ ದುಷ್ಕರ್ಮಿಗಳು
ಮಂಗಳೂರು , ಭಾನುವಾರ, 1 ಡಿಸೆಂಬರ್ 2019 (07:03 IST)
ಮಂಗಳೂರು : ಕಾಂಗ್ರೆಸ್ ಮುಖಂಡ, ಗ್ರಾಮ ಪಂಚಾಯತ್ ಅಧ್ಯಕ್ಷರೊಬ್ಬರ ಮೇಲೆ ದುಷ್ಕರ್ಮಿಗಳು ತಲ್ವಾರ್ ನಿಂದ ದಾಳಿ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಇರಾ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.



ರಝಾಕ್ ಕುಕ್ಕಾಜೆ ಹಲ್ಲೆಗೊಳಗಾದ ಕಾಂಗ್ರೆಸ್ ಮುಖಂಡ, ಈತ ಅನಾರೋಗ್ಯದ ಕಾರಣ ಆಸ್ಪತ್ರೆಗೆ ಹೋಗುತ್ತಿದ್ದಾಗ ಆ ವೇಳೆ ಬೈಕ್ ನಲ್ಲಿ ಬಂದ ಮೂವರು ದುಷ್ಕರ್ಮಿಗಳು ತಲ್ವಾರ್ ನಿಂದ ಅವರ ಮೇಲೆ ದಾಳಿ ಮಾಡಿದ್ದಾರೆ. ಆಗ ಅವರಿಂದ ರಝಾಕ್ ತಪ್ಪಿಸಿಕೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ಈ ಘಟನೆಯಲ್ಲಿ ರಝಾಕ್ ಕೈಗೆ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಸಂಸತ್ ಅಧಿವೇಶನದ ವೇಳೆ ಪ್ರಿಯತಮೆಗೆ ಪ್ರಪೋಸ್ ಮಾಡಿದ ಸಂಸದ