Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಲಾಠಿ ಮೂಲಕ ಚಳುವಳಿ ಧಮನಿಸುವ ಕೆಲಸ ಮಾಡಬಾರದು: ಮಲ್ಲಿಕಾರ್ಜುನ್ ಖರ್ಗೆ

ಲಾಠಿ ಮೂಲಕ ಚಳುವಳಿ ಧಮನಿಸುವ ಕೆಲಸ ಮಾಡಬಾರದು: ಮಲ್ಲಿಕಾರ್ಜುನ್ ಖರ್ಗೆ
ಬೆಂಗಳೂರು , ಭಾನುವಾರ, 31 ಜುಲೈ 2016 (14:18 IST)
ಧಾರವಾಡ ಪೊಲೀಸರಿಂದ ಮಹದಾಯಿ ಹೋರಾಟಗಾರರ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಅತಿರೇಕದಿಂದ ವರ್ತಿಸಿದ ಪೊಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು ರಾಜ್ಯ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಸಲಹೆ ನೀಡಿದ್ದಾರೆ. 
 
ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಯಮನೂರು ಗ್ರಾಮದಲ್ಲಿ ಅಮಾಯಕರ ಮೇಲೆ ಹಲ್ಲೆ ಪ್ರಕರಣಕ್ಕೆ ಆಕ್ರೋಶಗೊಂಡಿರುವ ಅವರು, ಅತಿರೇಕದಿಂದ ವರ್ತಿಸಿದ ಪೊಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಹಾಗೂ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಎಂದು ಆಗ್ರಹಿಸಿದ್ದಾರೆ.
 
ಪೊಲೀಸರು ಹಾಗೂ ಅಧಿಕಾರಿಗಳು ಹೋರಾಟಗಾರರು ಹಾಗೂ ರೈತರೊಂದಿಗೆ ಸಂಯಮದಿಂದ ವರ್ತಿಸಬೇಕು. ಲಾಠಿ ಚಾರ್ಜ್ ಮೂಲಕ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸಕ್ಕೆ ಮುಂದಾಗಬಾರದು. ರಾಜ್ಯದಲ್ಲಿ ಮತ್ತೊಮ್ಮೆ ಇಂತಹ ಘಟನೆಗಳು ನಡೆಯದಂತೆ ಎಚ್ಚರ ವಹಿಸಿ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು ರಾಜ್ಯ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಸೂಚನೆ ನೀಡಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮುಂಬೈ: ಮೂರಂತಸ್ತಿನ ಕಟ್ಟಡ ಕುಸಿತ, 6 ಜನರ ಸಾವು!