ಕಲಬುರ್ಗಿ: ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅತ್ತೆ ಶಿವಮ್ಮ ದೊಡ್ಮನಿ(95) ಇಹಲೋಕ ತ್ಯಜಿಸಿದ್ದಾರೆ.
ಚಿತ್ತಾಪುರ ತಾಲೂಕಿನ ಗುಂಡುಗುರ್ತಿ ಗ್ರಾಮದಲ್ಲಿ ಶಿವಮ್ಮ ಮೃತಪಟ್ಟಿದ್ದಾರೆ. ಮಲ್ಲಿಕಾರ್ಜುನ ಖರ್ಗೆಯ ಪತ್ನಿ ರಾಧಾಬಾಯಿಯ ತಾಯಿ ಶಿವಮ್ಮ. ಶಿವಮ್ಮ ಅವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರವಾಸೋದ್ಯಮ ಮತ್ತು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಅನೇಕ ಗಣ್ಯರು ನಾಳೆ ನಡೆಯಲಿರುವ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.