Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ರಾಜ್ಯದಲ್ಲಿ ಹಲವು ಅಧಿಕಾರಿಗಳ ಮೇಲೆ ಐಟಿ ದಾಳಿ ಮುಂದುವರಿದಿದ್ದು ಬಿಲ್ಡರ್ ಸಂತೋಷ್ ಮನೆಯಲ್ಲಿ ಸಿಕ್ಕ ಹಣದ ಕಂತೆಗೆ ಕಾಂಗ್ರೆಸ್ ನಾಯಕರೊಬ್ಬರ ನಂಟು ಇದೆ ಎಂಬ ಅನುಮಾನ ಬಂದಿದೆ.
ಬಿಲ್ಡರ್ ಸಂತೋಷ್ ಮನೆಯಲ್ಲಿ ಪತ್ತೆಯಾದದ ಹಣದ ಬಗ್ಗೆ ವಿಚಾರಣೆ ನಡೆಸಿದಾಗ ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಮಾಜಿ ಸದಸ್ಯ ಬೆಮಲ್ ಕಾಂತಾರಾಜು ಹೆಸರು ಥಳುಕು ಹಾಕಿಕೊಂಡಿದೆ. ಈ ಹಿನ್ನಲೆಯಲ್ಲಿ ಮಾಜಿ ಎಂಎಲ್ ಸಿಯ ಸಹೋದರ ಸಂಬಂಧಿಯನ್ನು ವಿಚಾರಣೆಯನ್ನೂ ನಡೆಸಲಾಗಿದೆ.
ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂತಾರಾಜು ನನಗೆ ಸಂತೋಷ್ ಯಾರೆಂದೇ ಗೊತ್ತಿಲ್ಲ ಎಂದಿದ್ದಾರೆ. ಸಂತೋಷ್ ಮೇಲೆ ನಡೆದ ಐಟಿ ದಾಳಿಗೂ ನನಗೂ ಸಂಬಂಧವಿಲ್ಲ. ಸಂತೋಷ್ ನನ್ನು ನಾನು ಇದುವರೆಗೆ ನೋಡಿಯೇ ಇಲ್ಲ ಎಂಧಿದ್ದಾರೆ.