Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಆರ್.ವಿ ದೇಶಪಾಂಡೆಯನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಎಂದು ಕಾಂಗ್ರೆಸ್ ಮುಖಂಡರು ಆಗ್ರಹಿಸಿದ್ಯಾಕೆ?

ಆರ್.ವಿ ದೇಶಪಾಂಡೆಯನ್ನು ಪಕ್ಷದಿಂದ ಉಚ್ಚಾಟನೆ ಮಾಡಿ  ಎಂದು ಕಾಂಗ್ರೆಸ್ ಮುಖಂಡರು ಆಗ್ರಹಿಸಿದ್ಯಾಕೆ?
ಬಾಗಲಕೋಟೆ , ಬುಧವಾರ, 9 ಜನವರಿ 2019 (07:57 IST)
ಬಾಗಲಕೋಟೆ : ಕಾಂಗ್ರೆಸ್ ನ ಕಂದಾಯ ಸಚಿವ ಆರ್.ವಿ ದೇಶಪಾಂಡೆ ಅವರು ಬಿಜೆಪಿಯವರ ಜೊತೆ ಊಟ ಮಾಡಿದ್ದಕ್ಕೆ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಬೇಕು ಎಂದು ಕಾಂಗ್ರೆಸ್ ಮುಖಂಡರು ಆಗ್ರಹಿಸಿದ್ದಾರೆ.


ಬರ ಅಧ್ಯಯನ ಮಾಡಲು ಕಂದಾಯ ಸಚಿವ ಆರ್.ವಿ‌.ದೇಶಪಾಂಡೆ ನೇತೃತ್ವದ ಸಚಿವ ಸಂಪುಟ ಉಪಸಮಿತಿ ಬೀಳಗಿ ತಾಲೂಕಿಗೆ ಭೇಟಿ ನೀಡಿತ್ತು. ಈ ವೇಳೆ ಸಚಿವರು ಮತ್ತು ಬರ ಅಧ್ಯಯನ ತಂಡ ಬಿಜೆಪಿ ಪಕ್ಷದ ಮಾಜಿ ಸಚಿವ ಮುರುಗೇಶ ನಿರಾಣಿ ಮನೆಯಲ್ಲಿ ಊಟ ಮಾಡಿದ್ದಾರೆ.


ಇದಕ್ಕೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಬಾರೀ ವಿರೋಧ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷದವರಿದ್ದರೂ ಎಲ್ಲರನ್ನು ಕಡೆಗಣಿಸಿ ಬಿಜೆಪಿ ಸದಸ್ಯರ ಜೊತೆ ಊಟ ಮಾಡಿದ್ದಾರೆ. ಇದು ಪಕ್ಷಕ್ಕೆ ಮಾಡಿದ ಅವಮಾನ. ಪಕ್ಷದ ಹಿರಿಯ ನಾಯಕನಾಗಿ ಬಿಜೆಪಿ ಜೊತೆ ಹೋಗಿದ್ದು ತಪ್ಪು. ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಅವರಿಗೆ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಮನವಿ ಮಾಡಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

Share this Story:

Follow Webdunia kannada

ಮುಂದಿನ ಸುದ್ದಿ

ಹಂಪಿ ಉತ್ಸವ ನಡೆಸುವಂತೆ ಆಗ್ರಹ