ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಯಾಕೆ ರಾಜೀನಾಮೆ ಪ್ರಕಟಿಸಿದ್ದಾರೆಂದು ಗೊತ್ತಿಲ್ಲ. ಆದರೆ, ಇಂದಿನ ಕಾಂಗ್ರೆಸ್ ನಾಯಕರು ಅವರನ್ನು ಕಡೆಗಣಿಸಿದ್ದರು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡ್‌ನಲ್ಲೂ ಎಸ್.ಎಂ.ಕೃಷ್ಣ ಅವರ ಮಾತಿಗೆ ಮನ್ನಣೆ ಇರಲಿಲ್ಲ. ಹೀಗಾಗಿ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿರಬಹುದು ಎಂದು ಅಭಿಪ್ರಾಯಪಟ್ಟರು.
ಸಿಎಂ ಸಿದ್ದರಾಮಯ್ಯ ಹಾಗೂ ಮತ್ತಿತ್ತರ ಮುಖಂಡರ ನಡವಳಿಗೆಯ ವಿರುದ್ಧ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅಸಮಧಾನಗೊಂಡಿದ್ದರು. ಹೀಗಾಗಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಅವರು, ರಾಜಕೀಯ ಚಟುವಟಿಕೆಗಳಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಸಂಬಂಧ ಇಂದು ಬೆಳಿಗ್ಗೆ 11 ಗಂಟೆಗೆ ತುರ್ತು ಪತ್ರಿಕಾಗೋಷ್ಠಿ ನಡೆಸಲಿರುವ ಎಸ್.ಎಂ.ಕೃಷ್ಣ, ತಮ್ಮ ರಾಜೀನಾಮೆಗೆ ಸ್ಪಷ್ಟ ಉತ್ತರ ನೀಡಲಿದ್ದಾರೆ.
ಎಸ್.ಎಂ.ಕೃಷ್ಣ ಅವರು ರಾಜ್ಯದಲ್ಲಿ 1999 ರಿಂದ 2004 ರವರೆಗೆ ಕಾಂಗ್ರೆಸ್‌ನಿಂದ ಮುಖ್ಯಮಂತ್ರಿಯಾಗಿದ್ದರು. ಮಹಾರಾಷ್ಟ್ರದಲ್ಲಿ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ