Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಸಚಿವ ಕೆ.ಎಸ್ ಈಶ್ವರಪ್ಪ ಅವರನ್ನು ವಜಾ ಮಾಡಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಶಾಸಕರು ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಅದರಂತೆ ಇಂದು ಬೆಳಿಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಶಾಸಕರು ವಿಧಾನಸೌಧದ ಆವರಣದಲ್ಲಿ ವಾಕಿಂಗ್ ಮಾಡಿದರು.
ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕುಳಿತು ದಿನಪತ್ರಿಕೆಗಳನ್ನು ಓದಿದ್ದಾರೆ. ಇನ್ನೂ ಈಶ್ವರಪ್ಪರ ರಾಜೀನಾಮೆಯನ್ನ ನಾವು ಕೇಳ್ತಿಲ್ಲ. ರಾಷ್ಟ್ರದ್ರೋಹದ ಹೇಳಿಕೆ ನೀಡಿದ ಈಶ್ವರಪ್ಪರನ್ನು ಸಿಎಂ ಬೊಮ್ಮಾಯಿ ಅಥವಾ ಸ್ಪೀಕರ್ ಅವರೇ ವಜಾ ಮಾಡಬೇಕು. ಅಲ್ಲಿಯವರೆಗೂ ಹೋರಾಟ ನಿಲ್ಲಲ್ಲ ಎಂದು ಕಾಂಗ್ರೆಸ್ ಎಚ್ಚರಿಸಿದೆ.