ಮಾಜಿ ಸಚಿವ ಎಚ್.ವೈ.ಮೇಟಿ ರಾಸಲೀಲೆ ಸಿಡಿ ಮೊದಲೇ ಸ್ಫೋಟಗೊಂಡಿದ್ದು, ಪ್ರಕರಣ ಬಯಲಿಗೆಳೆಯಲು ಕಾಂಗ್ರೆಸ್ ಶಾಸಕರೇ ಷಡ್ಯಂತ್ರ ನಡೆಸಿದ್ದರು ಎಂದು ಹೇಳಲಾಗುತ್ತಿದೆ.
ಕಾಂಗ್ರೆಸ್ ಶಾಸಕರಾದ ಎಂ.ಪಿ.ವಿರೇಂದ್ರ ಹಾಗೂ ವಿಜಯಾನಂದ ಕಾಶಪ್ಪನವರ ಮೇಟಿ ಪ್ರಕರಣವನ್ನು ಬಯಲಿಗೆಳೆಯಲು ಷಂಡ್ಯತ್ರ ರೂಪಿಸಿದ್ದರು ಎನ್ನಲಾಗುತ್ತಿದೆ. ಈ ಕುರಿತು ಬೆಳಗಾವಿ ಅಧಿವೇಶನದಲ್ಲಿ ಚರ್ಚೆ ಕೂಡಾ ನಡೆಸಿದ್ದರು ಎನ್ನಲಾಗಿದೆ.
ಸಚಿವರ ರಾಸಲೀಲೆ ಪ್ರಕರಣದ ಕುರಿತು ಶಾಸಕರಿಗೆ ಮೊದಲೇ ಮಾಹಿತಿ ಇದ್ದು, ಪಕ್ಷದ ಡ್ಯಾಮೇಜ್‌ಗೆ ಕಾರಣರಾಗಿದ್ದೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಶಾಸಕರ ವಿರುದ್ಧ ಗರಂ ಆಗಿದ್ದು, ಈ ಇಬ್ಬರು ಶಾಸಕರಿಗೆ ಶೋಕಾಸ್ ನೋಟಿಸ್ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಎಚ್.ವೈ.ಮೇಟಿ ರಾಸಲೀಲೆ ವಿಡಿಯೋ ಸಿಡಿಯನ್ನು ದೆಹಲಿಯಲ್ಲಿ ಆರ್‌ಟಿಐ ಕಾರ್ಯಕರ್ತ ರಾಜಶೇಖರ್ ಮುಲಾಲಿ ಅವರು ಬಿಡುಗಡೆಗೊಳಿಸಿದ್ದರು. ಸಚಿವರ ರಾಸಲೀಲೆ ಸಿಡಿ ಬಿಡುಗಡೆಯಾಗುತಿದ್ದಂತೆ ನೈತಿಕ ಹೊಣೆ ಹೊತ್ತು ಅಬಕಾರಿ ಸಚಿವ ಎಚ್.ವೈ.ಮೇಟಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ