ಬೆಂಗಳೂರು: ಲೋಕಸಭೆ ಚುನಾವಣೆಗೆ ತಯಾರಿ ನಡೆಸಲು ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆಸಿ ವೇಣುಗೋಪಾಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಜೆಡಿಎಸ್ ಜತೆಗೆ ಮುಂಬರುವ ಚುನಾವಣೆಗೆ ಮೈತ್ರಿ ಮಾಡಿಕೊಳ್ಳುವುದು ಬೇಡ ಎಂಬ ಅಭಿಪ್ರಾಯ ವ್ಯಕ್ತವಾಗಿದೆ ಎನ್ನಲಾಗಿದೆ.
ಮುಂಬರುವ ಲೋಕಸಭೆ ಚುನಾವಣೆಗೆ ಜೆಡಿಎಸ್ ಜತೆಗೆ ಮೈತ್ರಿ ಮಾಡಿಕೊಂಡರೆ ಮೈಸೂರು, ಮಂಡ್ಯದಂತಹ ಪ್ರಮುಖ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟು ಕೊಡಬೇಕಾಗುತ್ತದೆ. ಇದು ಪಕ್ಷಕ್ಕೆ ದೊಡ್ಡ ಹೊಡೆತ ನೀಡಲಿದೆ ಎಂದು ರಾಜ್ಯ ನಾಯಕರು ಸಭೆಯಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಈಗಾಗಲೇ ಕೆಲವು ನಾಯಕರು ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡರೆ ಸ್ವತಂತ್ರ ಸ್ಪರ್ಧೆ ಮಾಡುವುದಾಗಿ ಬಂಡಾಯವೆದ್ದಿದ್ದಾರೆ. ಹೀಗಾಗಿ ಮೈತ್ರಿ ಮಾಡಿಕೊಳ್ಳಬೇಕೋ ಬೇಡವೋ ಎಂಬುದರ ಬಗ್ಗೆ ಇಂದು ದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಜತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆಯಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.