ಬೆಂಗಳೂರು : ಸಿಎಲ್ ಪಿ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ವಿಚಾರ ರಾಜೀನಾಮೆ ಅಂಗೀಕರಿಸದಂತೆ ಹೈಕಮಾಂಡ್ ಮೇಲೆ ರಾಜ್ಯ ಕಾಂಗ್ರೆಸ್ ನಾಯಕರುಒತ್ತಡ ಹೇರುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಸಿದ್ದರಾಮಯ್ಯ ಪರ ಕೃಷ್ಣಭೈರೇಗೌಡ, ರಿಜ್ವಾನ್ ಅರ್ಷದ್, ಸೇರಿದಂತೆ ರಾಜ್ಯದ ಹಲವು ಕಾಂಗ್ರೆಸ್ ನಾಯಕರು ಒತ್ತಡ ಹೇರಿದ್ದು, ಹೈಕಮಾಂಡ್ ಸೂಚಿಸಿದ್ರೆ ರಾಜೀನಾಮೆ ವಾಪಾಸ್ ಪಡೀತಾರೆ. ರಾಜ್ಯದಲ್ಲಿ ಸಿದ್ದರಾಮಯ್ಯ ನಾಯಕತ್ವದ ಅವಶ್ಯಕತೆ ಇದೆ ಎಂದು ಹೇಳಿದ್ದಾರೆ.
ಬೈಎಲೆಕ್ಷನ್ ನಲ್ಲಿ 2 ಸೀಟು ಬರಲು ಸಿದ್ದರಾಮಯ್ಯ ಕಾರಣ. ಅವರ ನಾಯಕತ್ವ ಇಲ್ಲದಿದ್ರೆ ಮುಂದೆ ತೊಂದರೆ ಆಗಲಿದೆ. ಸಿಎಲ್ ಪಿ ನಾಯಕರಾಗಿ ಸಿದ್ದರಾಮಯ್ಯರನ್ನೇ ಮುಂದುವರಿಸಿ ಎಂದು ಕೆ.ಸಿ.ವೇಣುಗೋಪಾಲ್ ಜತೆ ರಾಜ್ಯ ನಾಯಕರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.