ಬೆಳಗಾವಿ : ಇಂದು ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ(ಸಿಎಲ್‍ಪಿ)ಯಲ್ಲಿ ಜೆಡಿಎಸ್ ಶಾಸಕರ ವಿರುದ್ಧ ಕಾಂಗ್ರೆಸ್ ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಜೆಡಿಎಸ್ ದೋಸ್ತಿ ಸರ್ಕಾರದಲ್ಲಿ ಜೆಡಿಎಸ್ ಶಾಸಕರಿಗೆ ಹೆಚ್ಚಿನ ಮಣೆ ಸಿಗುತ್ತಿದೆ ಎಂದು ಕಾಂಗ್ರೆಸ್ ಶಾಸಕರು ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ಧರಾಮಯ್ಯ ಅವರಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶನದಲ್ಲೂ ಜೆಡಿಎಸ್ ಶಾಸಕರದ್ದೇ ಮೇಲುಗೈ ಆಗಿದೆ. ಆದರೆ ಮೈತ್ರಿಯ ಭಾಗವಾಗಿದ್ದರೂ ನಮ್ಮ ಮಾತು ನಡೆಯುತ್ತಿಲ್ಲ, ಅನುದಾನ ನೀಡುವಲ್ಲೂ ಅನ್ಯಾಯವಾಗುತ್ತಿದೆ, ವರ್ಗಾವಣೆ ವಿಚಾರದಲ್ಲಿ ನಮ್ಮ ಮಾತಿಗೆ ಕಿಮ್ಮತ್ತಿನ ಬೆಲೆ ಎಂದು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಹಾಗೇ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ರಾಮಲಿಂಗ ರೆಡ್ಡಿ, ಎಂ.ಬಿ. ಪಾಟೀಲ್, ರೋಷನ್ ಬೇಗ್, ಎಸ್. ಆರ್. ಪಾಟೀಲ್, ಬಿ, ನಾಗೇಂದ್ರ ಸೇರಿ ಇತರರು ಸಭೆಯಿಂದ ದೂರ ಉಳಿದಿದ್ದಾರೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.