ಬೆಂಗಳೂರು: ರಾಜ್ಯಸಭೆ ಹಾಗೂ ವಿಧಾನಪರಿಷತ್ನ ಚುನಾವಣೆಗೆ ಅಭ್ಯರ್ಥಿ ಆಯ್ಕೆ ವಿಚಾರವಾಗಿ ದೆಹಲಿಯ ಕರ್ನಾಟಕ ಭವನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಚರ್ಚೆ ನಡೆಸುತ್ತಿದ್ದಾರೆ.
ದೆಹಲಿಯ ಕರ್ನಾಟಕ ಭವನದಲ್ಲಿ ನಡೆದ ಸುದ್ದಗೋಷ್ಠಿಯಲ್ಲಿ ಮಾತನಾಡಿದ ಡಾ.ಜಿ.ಪರಮೇಶ್ವರ್, ರಾಜ್ಯಸಭೆ ಚುನಾವಣೆಗೆ 3ನೇ ಅಭ್ಯರ್ಥಿಯಾಗಿ ಕೆ.ಸಿ.ರಾಮಮೂರ್ತಿ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆಸುತ್ತಿದ್ದೇವೆ. 3 ನೇ ಅಭ್ಯರ್ಥಿ ಗೆಲುವಿಗಾಗಿ ರಣತಂತ್ರ ರೂಪಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ರಾಜ್ಯಸಭೆಗೆ ಮೂರನೇ ಅಭ್ಯರ್ಥಿ ಆಯ್ಕೆ ಕುರಿತು ಇಂದು 11 ಗಂಟೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಾಗುತ್ತದೆ. ತದನಂತರ, ಕರ್ನಾಟಕ ಉಸ್ತುವರಿ ದಿಗ್ವೀಜಯ್ ಸಿಂಗ್ ಅವರನ್ನು ಭೇಟಿ ಮಾಡಿ ಚರ್ಚಿಸುವುದಾಗಿ ತಿಳಿಸಿದ್ದಾರೆ.
ವೆಬ್ದುನಿಯಾ ಮೊಬೈಲ್ ಆಪ್ (ಡೌನ್ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.