Publish Date: Sun, 13 Oct 2019 (15:56 IST)
Updated Date: Sun, 13 Oct 2019 (15:58 IST)
ಐಟಿ, ಇಡಿ ದಾಳಿ ವಿಚಾರವಾಗಿ ಕಾಂಗ್ರೆಸ್ ನವರು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ,
ಹೀಗಂತ ಸಚಿವ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ. ಕಾಂಗ್ರೆಸ್ ನವರು ಕೇವಲ ರಾಜಕಾರಣ ಸಲುವಾಗಿ ಟೀಕೆ ಮಾಡುತ್ತಿದ್ದಾರೆ. ಈ ಹಿಂದೆ ಡಿಕೆ ಶಿವಕುಮಾರ ಅವರ ಮೇಲೂ ಇಡಿ ದಾಳಿ ಮಾಡಿ, ಕೇಸ್, ತನಿಖೆ ನಡೆಸಿದಾಗಲೂ ಕಾಂಗ್ರೆಸ್ ಟೀಕೆ ಮಾಡುತ್ತಾ ಬಂದಿತ್ತು. ಇದೀಗ ಜಿ.ಪರಮೇಶ್ವರ ಆಸ್ತಿಗಳ ಮೇಲೆ ಐಟಿ ದಾಳಿ ಆಗಿದೆ. ಅದನ್ನು ಕೂಡಾ ಕಾಂಗ್ರೆಸ್ ಟೀಕಿಸುತ್ತಿದೆ ಎಂದರು.
ಜಿ. ಪರಮೇಶ್ವರ ಹೇಳಿರುವಂತೆ ಐಟಿ ದಾಳಿಯಲ್ಲಿ ಯಾವುದೇ ರಾಜಕೀಯ ಹಿನ್ನೆಲೆ ಇಲ್ಲ, ಮತ್ತೊಂದು ಇಲ್ಲ. ಕಾನೂನು ಬದ್ಧವಾಗಿ ನಡೆಸಲಾಗುತ್ತಿದೆ ಎಂದ್ರು. ಆದರೂ ಕಾಂಗ್ರೆಸ್ ನವರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ.
ಅವರಲ್ಲಿ ಮಾತನಾಡಲು ಯಾವುದೇ ವಿಷಯ ಇಲ್ಲ. ಹೀಗಾಗಿ ಐಟಿ ವಿಚಾರವನ್ನಿಟ್ಟುಕೊಂಡು ಬಿಜೆಪಿ, ಮೋದಿ, ಅಮಿತ್ ಷಾ ವಿರುದ್ಧ ಮಾತನಾಡುತ್ತಿದ್ದಾರೆ. ಐಟಿ ಇಲಾಖೆ ಪ್ರಮಾಣಿಕವಾಗಿ ಕೆಲಸ ಮಾಡುತ್ತಿದ್ದು, ಅವರನ್ನು ಪ್ರೋತ್ಸಾಹ ಮಾಡುವ ಕೆಲಸ ಆಗಬೇಕು. ಅದನ್ನು ಬಿಟ್ಟು ತಪ್ಪು ಮುಚ್ಚಿಕೊಳ್ಳಲು ಟೀಕೆ ಮಾಡುವುದು ಸರಿಯಲ್ಲ ಎಂದ್ರು.