Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಬೆಲೆಕೇರಿ ಅದಿರು ನಾಪತ್ತೆ ಪ್ರಕರಣ: ಶಾಸಕ ಸತೀಶ್ ಸೈಲ್ ಗೆ ಇನ್ನು ಇಷ್ಟು ವರ್ಷ ಜೈಲೂಟ

Sathish Sail

Krishnaveni K

ಬೆಂಗಳೂರು , ಶನಿವಾರ, 26 ಅಕ್ಟೋಬರ್ 2024 (16:28 IST)
ಬೆಂಗಳೂರು: ಬೆಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿರುವ ಶಾಸಕ ಸತೀಶ್ ಸೈಲ್ ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಇಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತೀರ್ಪು ಪ್ರಕಟಿಸಿದೆ.

ಬೆಲೆಕೇರಿ ಬಂದರಿನಿಂದ ಅದಿರು ಅಕ್ರಮ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಕೋರ್ಟ್ ಇಂದಿಗೆ ತೀರ್ಪು ಕಾಯ್ದಿರಿಸಿತ್ತು. ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಸೇರಿದಂತೆ 7 ಮಂದಿ ಆರೋಪಿಗಳ ಶಿಕ್ಷೆ ಪ್ರಮಾಣವನ್ನು ಇಂದು ಕೋರ್ಟ್ ಪ್ರಕಟಿಸಿದೆ.

ಪ್ರಕರಣದ ವಾದ-ವಿವಾದ ಆಲಿಸಿದ ಕೋರ್ಟ್ 7 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ. ಸದ್ಯಕ್ಕೆ ಎಲ್ಲಾ ಆರೋಪಿಗಳೂ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ. ಈ ತೀರ್ಪು ಐತಿಹಾಸಿಕವಾಗಿದ್ದು ಅಕ್ರಮ ಪ್ರಕರಣಗಳಲ್ಲಿ ಕಾನೂನು ಪ್ರಕಾರ ಶಿಕ್ಷೆಯಾಗೇ ಆಗುತ್ತದೆ ಎನ್ನುವುದಕ್ಕೆ ನಿದರ್ಶನವಾಗಿದೆ.

ಬಳ್ಳಾರಿ, ಹೊಸಪೇಟೆ, ಸಂಡೂರು ಮೊದಲಾದ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಭಾರೀ ಪ್ರಮಾಣದ ಕಬ್ಬಿಣದ ಅದಿರು ವಿದೇಶಕ್ಕೆ ರಫ್ತಾಗುತ್ತಿತ್ತು. 2010 ರ ಮಾರ್ಚ್ ನಲ್ಲಿ ಅರಣ್ಯ ಇಲಾಖೆ 350 ಕೋಟಿ ಮೌಲ್ಯದ ಅದಿರು ಮುಟ್ಟುಗೋಲು ಹಾಕಿಕೊಂಡಿತ್ತು. ಈ ಅದಿರನ್ನು ಕಾಯಲು ಬೇಲೇಕೇರು ಬಂದರು ನಿರ್ವಹಿಸುತ್ತಿದ್ದ ಬಂದರು ಇಲಾಖೆಗೆ ಅರಣ್ಯ ಇಲಾಖೆ ಸೂಚಿಸಿತ್ತು. ಆದರೆ ಎರಡು ತಿಂಗಳ ಬಳಿಕ ಪರಿಶೀಲಿಸಿದಾಗ ಅಲ್ಲಿ 250 ಕೋಟಿ ರೂ. ಮೌಲ್ಯದ ಅದಿರು ನಾಪತ್ತೆಯಾಗಿದ್ದು ಬೆಳಕಿಗೆ ಬಂತು. 2011 ರಲ್ಲಿ ಈ ಪ್ರಕರಣದ ವಿಚಾರಣೆಯನ್ನು ಸಿಬಿಐ ಕೈಗೊಪ್ಪಿಸಲಾಗಿತ್ತು. ಈ ತನಿಖೆ ವೇಳೆ ಸತೀಶ್ ಮಾಲಿಕತ್ವದ ಕಂಪನಿ ಸುಮಾರು 7.23 ಲಕ್ಷ ಮೆಟ್ರಿಕ್ ಅದಿರನ್ನು ವಿದೇಶಕ್ಕೆ ಅಕ್ರಮವಾಗಿ ರಫ್ತು ಮಾಡಿರುವುದು ಬೆಳಕಿಗೆ ಬಂದಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ವಕ್ಫ್ ನೋಟಿಸ್ ಹಿಂಪಡೆಯದೇ ಇದ್ರೆ ಅಸಮರ್ಥ ಸರ್ಕಾರದ ವಿರುದ್ಧ ಹೋರಾಟ: ಬಿಜೆಪಿ