ಕಾಂಗ್ರೆಸ್ ಅವನತಿಯತ್ತ ಸಾಗಿದೆ, ದಯನೀಯ ಸ್ಥಿತಿಯಲ್ಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಕಳೆದ ಹಲವು ದಶಕಗಳಿಂದ ದೇಶದ ಜನತೆಗೆ ಪೊಳ್ಳು ಭರವಸೆಗಳನ್ನು ನೀಡುತ್ತಿದೆ. ಜನತೆ ಇದೀಗ ತಕ್ಕ ಪಾಠ ಕಲಿಸಿದ್ದಾರೆ. ಮುಂಬರುವ ಚುನಾವಣೆಯಲ್ಲೂ ರಾಜ್ಯದ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಕಾಂಗ್ರೆಸ್ ಪಕ್ಷದ ಒಳರಾಜಕೀಯದಿಂದ ಬೇಸತ್ತು ಅ.17 ರಂದು ಕಾಂಗ್ರೆಸ್ ಶಾಸಕ ಶ್ರೀನಿವಾಸ್ ಪ್ರಸಾದ್ ರಾಜೀನಾಮೆ ನೀಡುತ್ತಿದ್ದಾರೆ. ಇದಕ್ಕಿಂತ ಬೇರೆ ಸಾಕ್ಷಿ ಬೇಕಾಗಿಲ್ಲ ಎಂದು ವ್ಯಂಗ್ಯವಾಡಿದರು.
ದಲಿತರನ್ನು ವಂಚಿಸುತ್ತಿರುವ ಕಾಂಗ್ರೆಸ್ ಪಕ್ಷ ನಮಗೆ ಬೇಕಾ ಎಂದು ಪ್ರಶ್ನಿಸಿದ ಅವರು, ದಲಿತರಿಗೆ ಅಧಿಕಾರ ತಪ್ಪಿಸಿರುವುದೇ ಕಾಂಗ್ರೆಸ್ ಪಕ್ಷ ಎಂದು ಮೂದಲಿಸಿದರು.
ಒಬಿಸಿ ಸಮಾವೇಶಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾರನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ