ಉಪಚುನಾವಣೆ ಕುರಿತಂತೆ ಪ್ರತಿಪಕ್ಷಗಳು ಮನಬಂದಂತೆ ಆರೋಪ ಮಾಡುತ್ತಿರುವುದರಿಂದ ಕಾಂಗ್ರೆಸ್ ಪಕ್ಷ ಉಪಚುನಾವಣೆಯಲ್ಲಿ ಗೆಲ್ಲಲೇಬೇಕಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.
ಉಪಚುನಾವಣೆಯನ್ನು ಕಾಂಗ್ರೆಸ್ ಪಕ್ಷ ಗಂಭೀರವಾಗಿ ಸ್ವೀಕರಿಸಿದೆ. ನಂಜನಗೂಡು ಮತ್ತು ಗುಂಡ್ಲುಪೇಟೆಯ ಜನತೆ ಕಾಂಗ್ರೆಸ್ ಪಕ್ಷಕ್ಕೆ ಎರಡನೇ ಬಾರಿ ಅವಕಾಶ ಕೊಡುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.
ಮುಂಬರುವ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುತ್ತೇವೆ ಎನ್ನುವ ಭ್ರಮೆಯಲ್ಲಿ ಬಿಜೆಪಿ ತೇಲಾಡುತ್ತಿದೆ. ಬಿಜೆಪಿ ಅಡಳಿತವನ್ನು ಜನತೆ ನೋಡಿದ್ದಾರೆ. ಹಿಂದೆ ಯಡಿಯೂರಪ್ಪ ಯಾವ ರೀತಿ ಸರಕಾರ ನಡೆಸಿದ್ದರು ಎನ್ನುವುದು ಜನತೆಗೆ ಗೊತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ರೈತ ಪರ, ಜನಪರ ವಾಗಿರುವುದನ್ನು ಸಹಿಸದ ಬಿಜೆಪಿ ಸರಕಾರದ ವಿರುದ್ಧ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತಿರುಗೇಟು ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.