Publish Date: Fri, 07 Jul 2023 (17:35 IST)
Updated Date: Fri, 07 Jul 2023 (18:05 IST)
ಎಐಸಿಸಿ ವರಿಷ್ಠ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ರದ್ದು ಹಿಂದಿನ ಬಿಜೆಪಿ ಪಿತೂರಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ.ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಶಾಸಕರು ಆಗಮಿಸುತ್ತಿದ್ದು,ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಸಚಿವರು ಮತ್ತು ಕಾಂಗ್ರೆಸ್ ಶಾಸಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.ಈ ವೇಳೆ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಮಾಡಿ ಆಕ್ರೋಶ ಹೊರಹಾಕಿದೆ.ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಕೈ ನಾಯಕರು ಆಕ್ರೋಶ ಹೊರಹಾಕಿದ್ದಾರೆ.ಅಲ್ಕದೇ ದ್ವೇಷದ ರಾಜಕಾರಣಕ್ಕೆ ದಿಕ್ಕಾರ ಎಂದು ಘೋಷಣೆ ಕೂಗುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.