ಗ್ಯಾಸ್ ಬೆಲೆ ಏರಿಕೆ ಖಂಡಿಸಿ,ಜಿ.ಪಂ ಮಾಜಿ ಅಧ್ಯಕ್ಷ ರಾದ ವೀಣಾ ಕಾಶಪ್ಪನವರ ಅವರ ನೇತೃತ್ವದಲ್ಲಿ ಮಹಿಳೆಯರು ರಸ್ತೆಯಲ್ಲಿ ಹೊಲೆ ಹಚ್ಚಿ ಅಡುಗೆ ಮಾಡುವ ಮೂಲಕ ನಡೆಸಿದರು. ಬಾಗಲಕೋಟ ಜಿಲ್ಲಾಡಳಿತ ಭವನದ ಎದುರು ಬೆಂಕಿ ಹಚ್ಚಿ ಹೊಲೆ ಹೂಡಿ ಅನ್ನ ವನ್ನು ಮಾಡುವ ಮೂಲಕ ಪ್ರತಿಭಟ
ನೆ ಮಾಡಿದರು.
ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಅಧ್ಯಕ್ಷರಾದ. ವೀಣಾ ಕಾಶಪ್ಪನವರ ಮಾತನಾಡಿ, ರಾಜ್ಯದಲ್ಲಿ ಮೊದಲೇ ಜನ ಕರೋನಾದಿಂದ ತತ್ತರಿಸಿ ಹೋಗಿದ್ದಾರೆ. ಈ ನಡುವೆ ದಿನೇ ದಿನೆ ಪೆಟ್ರೋಲ್, ಡೀಸೆಲ್, ಅಡುಗೆ ಸಿಲಿಂಡರ್ ಹಾಗೂ ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಸಂಕಷ್ಟ ಎದುರಿಸುತ್ತಿದ್ದಾರೆ. ಆದ್ದರಿಂದ ಬಿಜೆಪಿ ಸರ್ಕಾರ ಶೀಘ್ರ ತೈಲ ಹಾಗೂ ದಿನ ಬಳಕೆ ವಸ್ತುಗಳ ಬೆಲೆ ಕಡಿಮೆ ಮಾಡಬೇಕು.ಜನ ಸಾಮಾನ್ಯ ರಿಗೆ ಸಾಕಷ್ಟು ತೊಂದರೆ ಗ್ಯಾಸ್ ಇಲ್ಲದೆ,ಅಡುಗೆ ಮಾಡುವ ಸ್ಥಿತಿ ಬಂದಿದೆ.ಈ ಹಿನ್ನಲೆಯಲ್ಲಿ ಅಡುಗೆ ಮಾಡಿ ಸರ್ಕಾರ ಕ್ಕೆ ಎಚ್ಚರಿಕೆ ನೀಡದಲಾಗಿದೆ.
ಇದು ಜನಸಾಮಾನ್ಯರು, ಬಡವರ ಪರ ಇರುವ ಸರ್ಕಾರ ಅಲ್ಲ, ಬಡವರ ರಕ್ತ ಹೀರುವ ಸರ್ಕಾರ, ಜನ ಕೊರೋನಾ ಸಂಕಷ್ಟದಿಂದ, ಸಾವು-ನೋವಿನಿಂದ, ಆರ್ಥಿಕ ಸಮಸ್ಯೆಗಳಿಂದ ಸಾಯುತ್ತಿದ್ದಾರೆ, ಅಂತಹ ಸಂದರ್ಭದಲ್ಲಿ ಗಾಯದ ಮೇಲೆ ಬರೆ ಎಳೆದಂತೆ ಪೆಟ್ರೋಲ್ ದರ ಈ ರೀತಿ ದಿನದಿಂದ ದಿನಕ್ಕೆ ಹೆಚ್ಚಿಸಿದರೆ ಬಡವರು ಬದುಕುವುದು ಹೇಗೆ ಎಂದು ಪ್ರಶ್ನಿಸಿದರು.