Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಮನೋಹರ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಿಜೆಪಿ ವರಿಷ್ಠ ಅಮಿತ್ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಪಿಎಸ್ಐ ಅಕ್ರಮದಲ್ಲಿ ಸಚಿವರ ಹೆಸರು ಕೇಳಿಬರ್ತಿದೆ.
ಸರ್ಕಾರ ಭ್ರಷ್ಟರನ್ನ ರಕ್ಷಿಸುವ ಕೆಲಸ ಮಾಡ್ತಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು. ಹೈಕೋರ್ಟ್ ಸಿಟ್ಟಿಂಗ್ ಜಡ್ಜ್ ನೇತೃತ್ವದಲ್ಲಿ ತನಿಖೆಯಾಗಬೇಕು. ಸಚಿವರ ಸಹೋದರನನ್ನ ವಿಚಾರಣೆಗೆ ಓಳಪಡಿಸಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದರು.