ಕೇಂದ್ರ ಸರಕಾರ ಜಾರಿಗೆ ತರಲು ಉದ್ದೇಶಿಸಿರುವ ಮೋಟಾರ್ ಕಾಯ್ದೆ ವಿರೋಧಿಸಿ ಮಂಗಳೂರಿನ ಆರ್‌ಟಿಓ ಕಚೇರಿ ಮುಂಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್ ರೈ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ ಎಂದು ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರಕಾರ ಜಾರಿಗೆ ತರಲುದ್ದೇಶಿಸಿರುವ ಮೋಟಾರ್ ಕಾಯ್ದೆ ಜಾರಿಯಿಂದ ಜನಸಾಮಾನ್ಯರು ಎಂಕಷ್ಟು ಎದುರಿಸುವ ಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.
ಇದೇ ವೇಳೆ ಮಾತನಾಡಿದ ಕಾಂಗ್ರೆಸ್ ನಾಯಕ ಇಬ್ರಾಹಿಂ ಕೋಡಿಜಾಲ್ ಅವರು, ಮೋಟಾರ್ ಕಾಯ್ದೆ ಅಡಿಯಲ್ಲಿ ಚಾಲಕರ ಪರವಾನಿಗೆ ರದ್ದಾದಲ್ಲಿ 5 ವರ್ಷಗಳವರೆಗೂ ಪರವಾನಿಗೆ ರದ್ದಾಗೇ ಇರುತ್ತೇ. ಇದರಿಂದ ಚಾಲಕರು ತಮ್ಮ ಕುಟುಂಬ ನಿರ್ವಹಣೆಗೆ ಪರದಾಡುವಂತಾಗುತ್ತದೆ ಎಂದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ