Publish Date: Thu, 21 Apr 2022 (20:30 IST)
Updated Date: Thu, 21 Apr 2022 (20:33 IST)
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನ ಗೆಲ್ಲುವ ಗುರಿ ಇಟ್ಡುಕೊಳ್ಳಲಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಉದ್ದಗಲಕ್ಕೂ ಮುಖಂಡರು ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಬಿಜೆಪಿ ಹಿರಿಯ ಮುಖಂಡ, ಮಾಜಿ ಮುಖ್ಯಮಂತ್ರಿ ಬಿ..ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ, ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಾಡಿರುವ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮನೆಮನೆಗೆ ತಲುಪಿಸುವ ನಿಟ್ಟಿನಲ್ಲಿ ರಾಜಾದ್ಯಂತ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಕಾರ್ಯಕರ್ತರು ಈ ಕೆಲಸ ಮಾಡಬೇಕಿದೆ ಎಂದು ಹೇಳಿದರು. ದೇಶದಲ್ಲಿ ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಉತ್ತರ ಪ್ರದೇಶದಲ್ಲಿ 397 ಜನ ಠೇವಣಿ ಕಳೆದುಕೊಂಡಿದ್ದಾರೆ. ದೇಶದಲ್ಲಿ ನಾಯಕತ್ವ ಇಲ್ಲದ ಪಕ್ಷ ಕಾಂಗ್ರೆಸ್ ಪಕ್ಷ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಸ್ವಲ್ಪ ಉಸಿರಾಡುತ್ತಿದೆ ಎಂದರು.