ಕಾಂಗ್ರೆಸ್ ನಾಯಕರು ರಾಜ್ಯ ಮತ್ತು ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ BJP ಸರ್ಕಾರಕ್ಕೆ ಸೆಡ್ಡು ಹೊಡೆಯಲು ಮುಂದಾಗಿದ್ದಾರೆ. ಕಾಂಗ್ರೆಸ್ ಇಂದು ಬೆಳಗಾವಿಯಿಂದ ಪ್ರಜಾಧ್ವನಿ ಯಾತ್ರೆಯನ್ನುಆರಂಭಿಸಿದೆ. ಈ ಯಾತ್ರೆಗಾಗಿ ಎರಡು ಬಸ್ಗಳು ಅಣಿಯಾಗಿದ್ದು, ಕಾಂಗ್ರೆಸ್ ಧುರೀಣರು 21 ಜಿಲ್ಲೆಗಳಲ್ಲಿ ಸಂಚರಿಸಿ ಎರಡೂ ಸರ್ಕಾರಗಳ ವೈಫಲ್ಯಗಳನ್ನು ಜನರ ಮುಂದಿಡಲಿದ್ದಾರಂತೆ. ಬೆಳಗಾವಿ ವೀರಸೌಧದಲ್ಲಿ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಕಾಂಗ್ರೆಸ್ ನಾಯಕರು ಯಾತ್ರೆಯನ್ನು ಆರಂಭಿಸಿದ್ದಾರೆ. ಒಂದೇ ಸೀಟಿನಲ್ಲಿ ಕುಳಿತು ಮಾಜಿ ಸಿಎಂ ಸಿದ್ದರಾಮಯ್ಯ, KPCC ಅಧ್ಯಕ್ಷ D.K ಶಿವಕುಮಾರ್ ಪ್ರಯಾಣ ಆರಂಭಿಸಿದ್ದಾರೆ. ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಕೂಡ ಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಬೆಳಗಾವಿಯಿಂದ ಚಿಕ್ಕೋಡಿಗೆ ಪ್ರಜಾಧ್ವನಿ ಯಾತ್ರೆ ತೆರಳಲಿದೆ.