Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಕಾಂಗ್ರೆಸ್‌ನ ಮತಬ್ಯಾಂಕ್ ಆಧಾರಿತ ಪಕ್ಷಪಾತ ನಡೆ ಕರುನಾಡನ್ನು ದಹಿಸುತ್ತಿದೆ: ಬಿವೈ ವಿಜಯೇಂದ್ರ ಆಕ್ರೋಶ

ಕಾಂಗ್ರೆಸ್‌ನ ಮತಬ್ಯಾಂಕ್ ಆಧಾರಿತ ಪಕ್ಷಪಾತ ನಡೆ ಕರುನಾಡನ್ನು ದಹಿಸುತ್ತಿದೆ: ಬಿವೈ ವಿಜಯೇಂದ್ರ ಆಕ್ರೋಶ

Sampriya

ಬೆಂಗಳೂರು , ಗುರುವಾರ, 12 ಸೆಪ್ಟಂಬರ್ 2024 (17:00 IST)
ಬೆಂಗಳೂರು: ನಾಗಮಂಗಲದಲ್ಲಿ ಗಣಪತಿ ವಿಸರ್ಜನೆಯ ವೇಳೆ ಕಲ್ಲುತೂರಾಟ ನಡೆಸಿರುವ ಹಿಂದೂ ವಿರೋಧಿ ಮತಾಂದ ಕಿಡಿಗೇಡಿಗಳ ಅಟ್ಟಹಾಸದಿಂದ ಉದ್ಭವಿಸಿರುವ ಪ್ರಕ್ಷುಬ್ಧ ಪರಿಸ್ಥಿತಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ.

ನಾಗಮಂಗಲ ಗಲಭೆ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡ ಅವರು, ಈ ಘಟನೆಯನ್ನು ಅತ್ಯುಗ್ರವಾಗಿ ಖಂಡಿಸುತ್ತೇನೆ.
ಈ ಹಿಂದಿನ ವರ್ಷವೂ ಪುಂಡರು ಇದೇ ರೀತಿ ವರ್ತಿಸಿದ್ದ ಘಟನೆಯ ಹಿನ್ನೆಲೆಯಲ್ಲಿ  ಪೊಲೀಸರು  ಮುಂಜಾಗ್ರತೆಯ ಕಟ್ಟೆಚ್ಚರ ವಹಿಸವಲ್ಲಿ ಎಚ್ಚರ ತಪ್ಪಿರುವುದು ಸ್ಪಷ್ಟವಾಗಿದೆ.


ಕಾಂಗ್ರೆಸ್ ಸರ್ಕಾರದ ಆಡಳಿತ ಅವಧಿಯಲ್ಲಿ ನಮಗೆ ರಕ್ಷಣೆ ಸಿಗುತ್ತದೆ ಎಂಬ ದೃಢನಂಬಿಕೆ ವಿದ್ರೋಹಿ ಶಕ್ತಿಗಳು ವಿದ್ವಂಸಕ   ಕೃತ್ಯಗಳನ್ನು ನಡೆಸಲು ಪ್ರಚೋದನೆಯಾಗುತ್ತಿದೆ. ಜನರ ಧಾರ್ಮಿಕ ಶ್ರದ್ಧೆಯನ್ನು ಘಾಸಿಗೊಳಿಸಲು ಶಾಂತಿಯುತ ಗಣಪತಿ ವಿಸರ್ಜನೆಯ ಸಂದರ್ಭದಲ್ಲಿ ನಡೆದಿರುವ ಈ ಘಟನೆ ಹಿಂದೂ ಸಮುದಾಯವನ್ನು ಪ್ರಚೋದಿಸುವ ಕುಕೃತ್ಯವಾಗಿದೆ.

ಸೌಹಾರ್ದತೆಯ ಸಮಾಜದಲ್ಲಿ ದಳ್ಳುರಿ ಹಚ್ಚಲು ಯತ್ನಿಸುತ್ತಿರುವ, ಹಿಂದೂ ಸಮುದಾಯದ ಆಚಾರ ವಿಚಾರಗಳನ್ನು ದಮನ ಮಾಡುವ ರೀತಿಯಲ್ಲಿ ವರ್ತಿಸಿರುವ ಹಾಗೂ ಭಾರತೀಯ ಪರಂಪರೆಯನ್ನು ಸದಾ ಕಾಲಕ್ಕೂ ಅಪಮಾನಿಸಲು ಯತ್ನಿಸುತ್ತಿರುವ ಉಗ್ರ ಮನಸ್ಥಿತಿಯ ವಿದ್ರೋಹಿಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸಲಿ.

ನಾಗಮಂಗಲ ಘಟನೆಯನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿ ಹಿಂದೂ ವಿರೋಧಿ ಚಟುವಟಿಕೆಗಳನ್ನು ಸಂಘಟಿಸುತ್ತಿರುವ ದುಷ್ಟ ಶಕ್ತಿಗಳನ್ನು ನಿಗ್ರಹಿಸದೇ ಹೋದರೆ, ಮುಂದಾಗುವ ಪರಿಣಾಮಗಳ ಹೊಣೆ ಕಾಂಗ್ರೆಸ್ ಸರ್ಕಾರವೇ ಹೊರಬೇಕಾಗುತ್ತದೆ. ಕಾಂಗ್ರೆಸ್ ನ ಮತಬ್ಯಾಂಕ್ ಆಧಾರಿತ ಪಕ್ಷಪಾತ ನಡೆ ಕರುನಾಡನ್ನು ದಹಿಸುತ್ತಿದೆ ಎಂದು ಬರೆದುಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮುಧುರೈ: ರೆಫ್ರಿಜರೇಟರ್‌ ಸ್ಫೋಟಕ್ಕೆ ಇಬ್ಬರು ವಿದ್ಯಾರ್ಥಿನಿಯರು ದುರ್ಮರಣ, ಹಲವರಿಗೆ ಗಾಯ