Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಕರ್ನಾಟಕದಲ್ಲಿ ಅತೀ ಹೆಚ್ಚು ಸ್ಥಾನ ಗೆದ್ದು ಕಾಂಗ್ರೆಸ್ ಇತಿಹಾಸ ಸೃಷ್ಟಿಸುತ್ತದೆ: ಡಿ ಕೆ ಶಿವಕುಮಾರ್ ವಿಶ್ವಾಸ

DK Shivakumar

Sampriya

ಬೆಂಗಳೂರು , ಗುರುವಾರ, 4 ಏಪ್ರಿಲ್ 2024 (15:20 IST)
ಬೆಂಗಳೂರು:  ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ 20ಕ್ಕೂ ಅತೀ ಹೆಚ್ಚಿನ ಸ್ಥಾನಗಳನ್ನು ಗೆದ್ದು ಇತಿಹಾಸ ಸೃಷ್ಟಿಸಲಿದ್ದೇವೆ  ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ಗುರುವಾರ ಮಾಧ್ಯಮದ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಅತೀ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಇತಿಹಾಸವನ್ನು ರಚಿಸಲಿದೆ. ವಿಧಾನಸಭೆ ಚುನಾವಣೆಗಿಂತಲೂ ಹೆಚ್ಚಿನ ಸ್ಥಾನಗಳಲ್ಲಿ ಗೆಲುವನ್ನು ಪಡೆಯಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ದೇಶದಲ್ಲಿ ಮತ್ತು ರಾಜ್ಯಕ್ಕೆ ಹೊಸ ಬದಲಾವಣೆ ತರಬೇಕಾದ ನಿಟ್ಟಿನಲ್ಲಿ ಈ ಚುನಾವಣೆ ನಮಗೆ ಮುಖ್ಯವಾಗಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಜಯಭೇರಿಯಾಗಲಿದೆ. ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ  ಬ್ಲಾಕ್ ಪಕ್ಷಗಳ ಸಮನ್ವಯ ಸಮಿತಿಯನ್ನು ರಚಿಸುತ್ತೇವೆ. ಎಲ್ಲಾ ಮೈತ್ರಿ ಪಾಲುದಾರರು ನಮಗೆ ಲಿಖಿತ ಬೆಂಬಲ ಪತ್ರವನ್ನು ನೀಡಿದ್ದಾರೆ ಎಂದರು.

ಕರ್ನಾಟಕದ 28 ಕ್ಷೇತ್ರಗಳಿಗೆ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಕರ್ನಾಟಕವು 28 ಲೋಕಸಭಾ ಕ್ಷೇತ್ರಗಳನ್ನು ಹೊಂದಿದೆ, ಇದರಲ್ಲಿ ಐದು ಸ್ಥಾನಗಳು ಎಸ್‌ಸಿ ಅಭ್ಯರ್ಥಿಗಳಿಗೆ ಮತ್ತು ಎರಡು ಎಸ್‌ಟಿ ಅಭ್ಯರ್ಥಿಗಳಿಗೆ ಮೀಸಲಾಗಿದೆ.

2019 ರ ಲೋಕಸಭಾ ಚುನಾವಣೆಯಲ್ಲಿ, ಬಿಜೆಪಿ 51.7 ಶೇಕಡಾ ಮತಗಳ ಹಂಚಿಕೆಯೊಂದಿಗೆ 25 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ 32.1 ಶೇಕಡಾ ಮತ ಹಂಚಿಕೆಯೊಂದಿಗೆ 1 ಸ್ಥಾನವನ್ನು ಗೆದ್ದಿದೆ ಮತ್ತು ಕರ್ನಾಟಕದಲ್ಲಿ ಜೆಡಿಎಸ್ ಮತ್ತು ಸ್ವತಂತ್ರರು ತಲಾ ಒಂದು ಸ್ಥಾನವನ್ನು ಗೆದ್ದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಫಲಿಸಿತು ಕರುನಾಡ ಜನರ ಪ್ರಾರ್ಥನೆ: ಬೋರ್‌ವೆಲ್‌ನಿಂದ ಯಶಸ್ವಿಯಾಗಿ ಬಾಲಕನ ರಕ್ಷಣೆ