Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಕೆ.ಜೆ.ಜಾರ್ಜ್ ಸಂಪುಟ ಸೇರಿದರೆ ರಾಜ್ಯ ಕಾಂಗ್ರೆಸ್ ಸರ್ವನಾಶ: ಜನಾರ್ದನ ಪೂಜಾರಿ

ಕೆ.ಜೆ.ಜಾರ್ಜ್ ಸಂಪುಟ ಸೇರಿದರೆ ರಾಜ್ಯ ಕಾಂಗ್ರೆಸ್ ಸರ್ವನಾಶ: ಜನಾರ್ದನ ಪೂಜಾರಿ
ಮಂಗಳೂರು , ಸೋಮವಾರ, 19 ಸೆಪ್ಟಂಬರ್ 2016 (09:35 IST)
ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಅವರು ಮತ್ತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟಕ್ಕೆ ಸೇರಿಕೊಂಡರೆ ರಾಜ್ಯ ಕಾಂಗ್ರೆಸ್ ಪಕ್ಷ ನಾಶವಾಗಲಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಗುಡುಗಿದ್ದಾರೆ.
 
ಕುದ್ರೋಳಿ ಕ್ಷೇತ್ರದಲ್ಲಿ ಉರುಳು ಸೇವೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಕೆ.ಜೆ.ಜಾರ್ಜ್ ಅವರನ್ನು ಉಳಿಸಲು ಎಲ್ಲರೂ ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದರು. 
 
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐ ತನಿಖೆಗೆ ಬದಲಿಗೆ ಸಿಐಡಿ ತನಿಖೆಗೆ ಒಪ್ಪಿಸಿದ್ದರ ಹಿಂದೆ ಯಾವ ಷಡ್ಯಂತ್ರ ಇತ್ತು ಎನ್ನುವುದು ಈಗ ಜನರಿಗೆ ಅರಿಯಾಗಿದೆ. ಪ್ರಕರಣದ ಆರೋಪಿಗಳನ್ನು ರಕ್ಷಿಸಲು ಎನ್ನೆಲ್ಲ ಕಸರತ್ತು ಮಾಡಿದ್ದರು. ಇನ್ನು ಎಷ್ಟು ಕಾಲ ಆರೋಪಿಗಳನ್ನು ರಕ್ಷಿಸಲು ಸಾಧ್ಯ. 2018ರ ನಂತರ ಬರುವ ಹೊಸ ಸರಕಾರ ಈ ಕುರಿತು ಮರುತನಿಖೆ ನಡೆಸಬಹುದು ಎಂದು ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಸ್ವಾತಿ ಕೊಲೆ ಪ್ರಕರಣ: ಆರೋಪಿ ರಾಮ್ ಕುಮಾರ್ ಆತ್ಮಹತ್ಯೆ