ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳು ಕಾಂಗ್ರೆಸ್ ಪಕ್ಷದ ಬಲಾಢ್ಯ ಕೋಟೆಯಾಗಿದ್ದರಿಂದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗೆಲುವು ಖಚಿತ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯರ ಜನಪರ ಕಾರ್ಯಗಳಿಂದಾಗಿ ಎರಡೂ ಕ್ಷೇತ್ರಗಳ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಮಣೆಹಾಕಲಿದ್ದಾರೆ ಎನ್ನುವ ವಿಶ್ವಾಸವಿದೆ. ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಮಹಾದೇವ ಪ್ರಸಾದ್ ಪರ ಅನುಕಂಪದ ಅಲೆಯಿದೆ ಎಂದು ತಿಳಿಸಿದ್ದಾರೆ.
ಸರಳ ಸಜ್ಜನಿಕೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಕಳಲೆ ಕೃಷ್ಣಮೂರ್ತಿ ತಮ್ಮ ಎದುರಾಳಿ ಶ್ರೀನಿವಾಸ್ ಪ್ರಸಾದ್ ಅವರಿಗಿಂತ ಭಾರಿ ಬಹುಮತಗಳ ಅಂತರದಿಂದ ಜಯಗಳಿಸಲಿದ್ದಾರೆ
ಕಾಂಗ್ರೆಸ್ ಪಕ್ಷದಿಂದ ಸಂಸದರಾಗಿ, ಸಚಿವರಾಗಿ ಸೇವೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಪ್ರಸಾದ್, ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಿಲ್ಲ. ಕೇವಲ ಸ್ವಾರ್ಥ ಸಾಧನೆಗಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ ಎಂದರು.
ಸಿಎಂ ಸಿದ್ದರಾಮಯ್ಯರ ನಾಲ್ಕು ವರ್ಷಗಳ ಜನಪರ ಯೋಜನೆಗಳು ಮತ್ತು ಪಕ್ಷದ ಕಾರ್ಯಕರ್ತರ ಅವಿರತ ಶ್ರಮದಿಂದಾಗಿ ಕಾಂಗ್ರೆಸ್ ಪಕ್ಷ ಗೆಲ್ಲುವ ವಿಶ್ವಾಸವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.