ಮತದಾರರ ಮಾಹಿತಿ ಅಕ್ರಮವಾಗಿ ಸಂಗ್ರಹಿಸಿದ ಆರೋಪದಾಡಿ ಕಾಂಗ್ರೆಸ್ ನಿಯೋಗ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.ಚುನಾವಣಾ ಪ್ರಕ್ರಿಯೆಯನ್ನ ಭ್ರಷ್ಟಾಚಾರಗೊಳಿಸುವ ಹುನ್ನಾರ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ ಹಲವು ಮುಖಂಡರಿಂದ ದೂರು ದಾಖಲಾಗಿದೆ.ದೂರು ಕೊಟ್ಟ ಬಳಿಕ ಕೈ ನಾಯಕರು ಪ್ರತಿಭಟನೆಗೆ ಸಜ್ಜಾಗಿದ್ದು ಚುನಾವಣಾ ಆಯೋಗದ ಮುಂದೆ ಕಾಂಗ್ರೆಸ್ ಮುಖಂಡರು ಬಿಜೆಪಿ ವಿರುದ್ಧ ಪ್ರತಿಭಟನೆಗೆ ಕುಳಿತಿದ್ದಾರೆ.