Publish Date: Thu, 24 May 2018 (09:19 IST)
Updated Date: Thu, 24 May 2018 (09:25 IST)
ಬೆಂಗಳೂರು: ನಿನ್ನೆಯಷ್ಟೇ ಜೆಡಿಎಸ್-ಕಾಂಗ್ರೆಸ್ ಸರ್ಕಾರದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಸಿಎಂ ಕುಮಾರಸ್ವಾಮಿ ಭೇಟಿಗೆ ಇಂದು ಬೆಳ್ಳಂ ಬೆಳಿಗ್ಗೆಯೇ ಅವರ ಜೆಪಿ ನಗರದ ನಿವಾಸದ ಮುಂದೆ ಜನ ಜಮಾಯಿಸಿದ್ದರು.
ಸಿಎಂ ಆದ ಕುಮಾರಸ್ವಾಮಿಗೆ ಅಭಿನಂದನೆ ಸಲ್ಲಿಸಲು ಕಾಂಗ್ರೆಸ್ ಕಾರ್ಯಕರ್ತರು ಅವರ ನಿವಾಸದ ಮುಂದೆ ಬಂದರೂ ಅವರಿಗೆ ಗೇಟಿನೊಳಗೆ ಪ್ರವೇಶ ಸಿಗಲಿಲ್ಲ. ಭದ್ರತಾ ಕಾರಣದಿಂದ ಅವರನ್ನು ಒಳಗೆ ಬಿಡಲಿಲ್ಲ.
ಇನ್ನೊಂದೆಡೆ ಬೆಳಿಗ್ಗೆಯೇ ರಾಜ್ಯ ಪೊಲೀಸ್ ವರಿಷ್ಠಾಧಿಕಾರಿ ನೀಲಮಣಿ ರಾಜು ಸಿಎಂ ನಿವಾಸಕ್ಕೆ ಭೇಟಿ ನೀಡಿ ಅಭಿನಂದನೆ ಸಲ್ಲಿಸಿದರಲ್ಲದೆ, ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚೆ ನಡೆಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.