ಕಾಂಗ್ರೆಸ್ ಗೆ ಈಗ ಸ್ವತಃ ಮಿತ್ರಪಕ್ಷವಾಗಿರುವ ಜೆಡಿಎಸ್ ನ ನಡೆಯಿಂದ ಚಿಂತೆ ಹೆಚ್ಚಾಗುವಂತೆ ಮಾಡಿದೆ.
ಕಾಂಗ್ರೆಸ್ ನಾಯಕರಲ್ಲಿ ಜೆಡಿಎಸ್ ನ ಮುಖಂಡರ ಬಗೆಗೆ ಅಸಮಧಾನ ತಾಂಡವವಾಡುತ್ತಿದೆ. ಇದಕ್ಕೆ ಕಾರಣವೂ ಇದೆ. ಈಚೆಗೆ ದೆಹಲಿ ಭೇಟಿ ಮಾಡಿ ಬಂದಿರುವ ಜೆಡಿಎಸ್ ಮುಖಂಡರ ನಡೆ ಹಾಗೂ ತಂತ್ರಗಾರಿಕೆ ಕೈ ಪಾಳೆಯದಲ್ಲಿ ತಳಮಳಕ್ಕೆ ಕಾರಣವಾಗಿದೆ.
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಸಚಿವ ಹೆಚ್.ಡಿ.ರೇವಣ್ಣ ದೆಹಲಿಗೆ ತೆರಳಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.
ಇದರ ಲಾಭ ಪಡೆಯಲು ಬಿಜೆಪಿ ಯತ್ನಿಸುತ್ತಿದೆ ಎಂಬ ಮಾತುಗಳು ಕೇಳಿಬರಲಾರಂಭಿಸಿವೆ.