ಚಿಕ್ಕಮಗಳೂರು : ಶಿಕ್ಷಣ ಕ್ಷೇತ್ರಕ್ಕೆ ಒತ್ತು ನೀಡುವ ಸರ್ಕಾರ ನಮ್ಮದು. ಒಂದೇ ವರ್ಷದಲ್ಲಿ 8,000 ವಿವೇಕ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಚಿಕ್ಕಮಗಳೂರು ಜಿಲ್ಲೆ ಕೊಪ್ಪದಲ್ಲಿ ಬಿಜೆಪಿ ಏರ್ಪಡಿಸಿದ್ದ ಜನಸಂಕಲ್ಪ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಅವರು,
ನಾರಾಯಣ ಗುರು ಅವರ ಹೆಸರಿನಲ್ಲಿ ವಸತಿ ಶಾಲೆ, ಎಸ್ಸಿ, ಎಸ್ಟಿ ಮಕ್ಕಳಿಗೆ ಹಾಸ್ಟೆಲ್ ನಿರ್ಮಾಣ, 50 ಕನಕದಾಸ ಹಾಸ್ಟೆಲ್ ನಿರ್ಮಿಸುವ ಮೂಲಕ ಶೈಕ್ಷಣಿಕ ಕ್ರಾಂತಿಯನ್ನು ಮಾಡಲಾಗುತ್ತಿದೆ ಎಂದರು.
ಸ್ವರ್ಗಕ್ಕೆ ಕಿಚ್ಚು ಹಚ್ಚುವಂತಹ ನಾಡು ಶೃಂಗೇರಿ. ನಾನು ದೇವರ ನಾಡಿಗೆ ಬಂದಿದ್ದೇನೆ ಎಂದ ಮುಖ್ಯಮಂತ್ರಿಗಳು, ಜನಸಂಕಲ್ಪ ಯಾತ್ರೆಗೆ ಜನರ ಬೆಂಬಲ ಸಿಗುತ್ತಿದೆ. ಮೋದಿ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತಿದ್ದೇವೆ.
ರಾಜ್ಯದಲ್ಲಿ ಡಬಲ್ ಎಂಜಿನ್ ಸರ್ಕಾರ ಆಡಳಿತ ನಡೆಸುತ್ತಿದೆ. ಜನಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲದಿಂದ ವಿಜಯ ಸಂಕಲ್ಪ ಯಾತ್ರೆಯಾಗಿ ಯಶಸ್ವಿಯಾಗಿದೆ ಎಂದು ಹೇಳಿದರು.