Publish Date: Fri, 13 May 2022 (20:27 IST)
Updated Date: Fri, 13 May 2022 (20:30 IST)
ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೂ 3 ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾದ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಕರ್ನಾಕದಲ್ಲಿ ಇನ್ನೂ 3 ದಿನ ಗುಡುಗು ಸಹಿತ ಭಾರೀ ಮಳೆಯಾಗಲಿದೆ.