ಪೇಜಾವರ ಶ್ರೀಗಳಿಗೆ ನಿನ್ನೆ ಮುಂಜಾನೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿತ್ತು. ಇದೀಗ ಐಸಿಯುನಲ್ಲಿ ಕೃತಕ ಉಸಿರಾಟದ ವ್ಯವಸ್ಥೆ ಅಳವಡಿಸಲಾಗಿದ್ದು, ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಈ ನಡುವೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಅವರು ಫೋನ್ ಮಾಡಿ ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ ಎನ್ನಲಾಗಿದೆ. ಹಾಗೇ ನಾಳೆ ಸಿಎಂ ಯಡಿಯೂರಪ್ಪ ಅವರು ಉಡುಪಿಗೆ ತೆರಳಿ ಶ್ರೀಗಳ ಆರೋಗ್ಯ ವಿಚಾರಿಸಲಿದ್ದಾರೆ ಎನ್ನಲಾಗಿದೆ.