ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೀದರ್ ನಲ್ಲಿ ಪ್ರತಿಭಟನೆ ನಡೆದಿದೆ. ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಗುತ್ತಿಗೆ ನೌಕರ ಸಂಘದಿಂದ ನಡೆದ ಪ್ರತಿಭಟನೆ ಇದಾಗಿದೆ. ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಡಿಸಿ ಕಚೇರಿ ವರೆಗೆ ಬೃಹತ್ ರ್ಯಾಲಿ ನಡೆಸಲಾಯಿತು.
ನಂತರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಆರೋಗ್ಯ ಗುತ್ತಿಗೆ ನೌಕರರಿಂದ ಸತ್ಯಾಗ್ರಹ ನಡೆಯಿತು. ಬೀದರ್ ಜಿಲ್ಲೆಯಲ್ಲಿ ಒಟ್ಟು 5 ಸಾವಿರ ಗುತ್ತಿಗೆ ನೌಕರರು ಇದ್ದಾರೆ. ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು.
ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಸೇವಾ ಭದ್ರತೆ, ಖಾಯಂ ಕೆಲಸ ಮತ್ತು ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಂತೆ ಪಟ್ಟು ಹಿಡಿದರು.