Webdunia - Bharat's app for daily news and videos

Install App

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಸಚಿವ ಪ್ರಿಯಾಂಕ್‌ ಖರ್ಗೆ ಬಂಧನಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

Sampriya
ಶನಿವಾರ, 28 ಡಿಸೆಂಬರ್ 2024 (18:11 IST)
Photo Courtesy X
ಬೆಂಗಳೂರು: ಮೃತ ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆ ಪ್ರಕರಣ ಸಂಬಂಧ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು.

ಮೃತ ಗುತ್ತಿಗೆದಾರ ಸಚಿನ್‌ ಅವರು ಏಳು ಪುಟಗಳ ಮರಣಪತ್ರ ಬರೆದಿದ್ದಾರೆ. ಸಾಮಾಜಿಕ ಜಾಲತಾಣದಲ್ಲೂ ಹಾಕಿದ್ದಾರೆ. ಅವರನ್ನು ಸುಪಾರಿ ಕೊಟ್ಟು ಕೊಲ್ಲಿಸುವ ವಿಚಾರವೂ ಪ್ರಸ್ತಾವವಾಗಿದೆ. ಅವರಲ್ಲಿ ಪ್ರಿಯಾಂಕ್‌ ಖರ್ಗೆ ಆಪ್ತರ ಹೆಸರುಗಳೂ ಇವೆ. ತನಿಖೆ ಸರಿಯಾಗಿ ನಡೆಯಲು ಅವರ ರಾಜೀನಾಮೆ ಅಗತ್ಯ ಎಂದು ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ಪ್ರಿಯಾಂಕ್‌ ಖರ್ಗೆ ತಮಗೆ ಬೇಕಾದವರನ್ನು ಮುಂದಿಟ್ಟುಕೊಂಡು ವ್ಯವಹಾರ ಮಾಡುತ್ತಿದ್ದಾರೆ. ರಿಪಬ್ಲಿಕ್‌ ಆಫ್‌ ಕಲಬುರಗಿ ಆಗಿದೆ. ಕರ್ನಾಟಕದ ವ್ಯವಸ್ಥೆಯೇ ಬೇರೆ, ಅಲ್ಲಿನ ವ್ಯವಸ್ಥೆಯೇ ಬೇರೆ ಇದೆ. ಪೊಲೀಸರೂ ಖರ್ಗೆ ಹೇಳಿದಂತೆ ನಡೆದುಕೊಳ್ಳುತ್ತಿದ್ದಾರೆ. ದಲಿತ ಸಮುದಾಯಗಳು ಅವರ ವಿರುದ್ಧ ಮಾತನಾಡಿದರೆ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ದೂರಿದರು.

ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಕಲಬುರಗಿ ಗುತ್ತಿಗೆದಾರ ಸಚಿನ್‌ ಕುಟುಂಬದ ಜತೆ ಬಿಜೆಪಿ ನಿಲ್ಲಲಿದೆ. ಸಚಿವರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಈ ಕುರಿತು ಬಿಜೆಪಿ ಹೊರಾಟ ರೂಪಿಸಲಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್‌ ತಿಳಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments