ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಪ್ರತಿಭಟನೆ ನಡೆಸಲಾಗ್ತಿದೆ. ಬೆಂಗಳೂರಿನಲ್ಲಿ ಪ್ರತಿಭಟನೆ ಆರಂಭಿಸಲಾಗಿದೆ. ಇಂದು ಈ ಪ್ರತಿಭಟನೆ 2ನೇ ದಿನಕ್ಕೆ ಕಾಲಿಟ್ಟಿದೆ. ಬೇಡಿಕೆ ಈಡೇರಿಲ್ಲ ಅಂದ್ರೆ ಪ್ರತಿಭಟನೆ ಮುಂದುವರಿಸುವ ಎಚ್ಚರಿಕೆಯನ್ನು ಅವರು ಕೊಟ್ಟಿದ್ದಾರೆ. ರಾಜ್ಯದ ಎಲ್ಲಾ ಕಡೆ ವಿದ್ಯುತ್ ಕಾಮಗಾರಿ ಸ್ಥಗಿತಗೊಳಿಸುತ್ತೇವೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಸರ್ವರ್ ಮತ್ತು ಮೀಟರ್ ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕು. ರಾಜ್ಯದಲ್ಲಿ 1 ಲಕ್ಷ ರೂ.ಗಳಿಂದ 5 ಲಕ್ಷ ರೂ. ಒಳಗಿನ ಕಾಮಗಾರಿಗಳನ್ನು ಸ್ಥಳೀಯ ಗುತ್ತಿಗೆದಾರರಿಗೆ ನೀಡಬೇಕು. ತತ್ಕಾಲ್ ಯೋಜನೆ ಅಡಿಯಲ್ಲಿ ಅನುದಾನ ಸ್ಥಗಿತಗೊಳಿಸಲಾಗಿದ್ದು, ಇದಕ್ಕೆ ಕೂಡಲೇ ಅನುದಾನ ನೀಡಬೇಕು ಎಂದು ಅವರು ಬೇಡಿಕೆ ಇಟ್ಟಿದ್ದಾರೆ. ಬೆಳಕು ಯೋಜನೆಗೆ ಬೆಸ್ಕಾಂ ನೀಡುತ್ತಿರುವ ದರವನ್ನು ಎಲ್ಲಾ ಎಸ್ಕಾಂಗಳಲ್ಲಿ ಜಾರಿಗೊಳಿಸಿ. ಯೋಜನೆಯ ಕಾಮಗಾರಿ ನಿರ್ವಹಿಸಿರುವ ಬಿಲ್‌ಗಳಿಗೆ ಹಣ ಬಿಡುಗಡೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.