ಕೊರೊನಾ ವೈರಸ್ ಕೇಸ್ ಹೆಚ್ಚಾದ ಪರಿಣಾಮ ಜಿಲ್ಲಾ ಕೇಂದ್ರದ ನಗರವನ್ನೇ ಡಿಸಿವೊಬ್ಬರು ಸೀಲ್ ಡೌನ್ ಮಾಡಿದ್ದಾರೆ.
ಚಿಕ್ಕಬಳ್ಳಾಪುರ ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ನಗರವನ್ನು ಸಂಪೂರ್ಣ ಸೀಲ್‍ಡೌನ್ ಮಾಡಲಾಗುತ್ತಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.
ಹೊಸದಾಗಿ ಮೂರು ಕೊರೊನಾ ಕೇಸ್ ದೃಢವಾದ ಹಿನ್ನಲೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಂತರ ಮಾತನಾಡಿದ ಜಿಲ್ಲಾಧಿಕಾರಿ ಆರ್.ಲತಾ, 17 ನೇ ವಾರ್ಡಿನಲ್ಲಿ ಕೊರೊನಾ ಗೆ ಮೃತನಾದ ವೃದ್ಧನ ಕೊನೆಯ ಮಗ ಹಾಗೂ ಎದುರುಗಡೆ ಮನೆಯ ಇಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದರು.
ಮುನ್ನೆಚ್ಚರಿಕೆ ಕ್ರಮವಾಗಿ ವೃದ್ಧ ಮೃತಪಟ್ಟಾಗ 17ನೇ ವಾರ್ಡು ಸೇರಿದಂತೆ ಅಕ್ಕ ಪಕ್ಕದ ನಾಲ್ಕು ವಾರ್ಡುಗಳನ್ನು ಮಾತ್ರ ಸೀಲ್‍ಡೌನ್ ಮಾಡಲಾಗಿತ್ತು. ಈಗ ಸೋಂಕಿತರ ಸಂಖ್ಯೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಇಡೀ ಚಿಕ್ಕಬಳ್ಳಾಪುರ ನಗರವನ್ನೇ ಸಂಪೂರ್ಣ ಸೀಲ್‍ಡೌನ್ ಮಾಡಲಾಗುತ್ತಿದೆ. ಆಯಾ ವಾರ್ಡುವಾರು ಸ್ವಯಂಸೇವಕರ ಮೂಲಕ ಅಗತ್ಯ ವಸ್ತುಗಳನ್ನು ಮನೆ ಬಾಗಿಲಿಗೇ ತಲುಪಿಸಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.