ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 617 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ನಿನ್ನೆಗೆ ಹೋಲಿಸಿದರೆ ಅಲ್ಪ ಪ್ರಮಾಣದಲ್ಲಿ ಕುಸಿತ ಕಂಡು ಬಂದಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಪ್ರಕಟಿಸಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4288ಕ್ಕೆ ಕುಸಿದಿದ್ದು, ಪಾಸಿಟಿವಿಟಿ ಪ್ರಮಾಣ ಶೇ.3.12ಕ್ಕೆ ಕುಸಿದಿದೆ.
ಬೆಂಗಳೂರಿನಲ್ಲಿ ಒಂದೇ ದಿನದಲ್ಲಿ 592 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ನಿನ್ನೆಗೆ ಹೋಲಿಸಿದರೆ ಕಡಿಮೆ ಪ್ರಕರಣಗಳು ವರದಿಯಾಗಿವೆ.