Publish Date: Sat, 11 Dec 2021 (10:05 IST)
Updated Date: Sat, 11 Dec 2021 (10:07 IST)
ಚಿಕ್ಕಮಗಳೂರು : ಜಿಲ್ಲೆಯ ಮತ್ತೊಂದು ಶಾಲೆಯಲ್ಲಿ ಕೊರೊನಾ ಸೋಂಕು ಸ್ಫೋಟವಾಗಿದೆ.
ಶಿಕ್ಷಕ ಸೇರಿ 11 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಒಂದು ವಾರ ಕಾಲ ಶಾಲೆ ಸೀಲ್ ಡೌನ್ ಮಾಡಿ ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಆದೇಶ ಹೊರಡಿಸಿದ್ದಾರೆ. ಓ ಖ ಪುರ ತಾಲೂಕಿನ ಜೀವನ್ ಜ್ಯೋತಿ ಖಾಸಗಿ ಶಾಲೆಯಲ್ಲಿ ಸೋಂಕು ಕಾಣಿಸಿಕೊಂಡಿದೆ.
ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಮನೆಯಲ್ಲೇ ಐಸೊಲೇಷನ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ವಾರದ ಹಿಂದೆ ನವೋದಯ ಶಾಲೆಯ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಕೊಪ್ಪ ತಾಲ್ಲೂಕಿನ ಸೀಗೋಡಿನ ವಸತಿ ಶಾಲೆಯಲ್ಲಿ ಕೊರೊನಾ ಹಬ್ಬಿತ್ತು.
Ramya kosira
Publish Date: Sat, 11 Dec 2021 (10:05 IST)
Updated Date: Sat, 11 Dec 2021 (10:07 IST)