ಚೀನಾದಲ್ಲಿ ಕಠಿಣ ಲಾಕ್‌ಡೌನ್ ನಿರ್ಬಂಧಗಳ ನಡುವೆಯೂ ಸೋಂಕಿನ ಅಬ್ಬರ ಹೆಚ್ಚಾಗುತ್ತಿದೆ..ನಿನ್ನೆ 3,400ಕ್ಕೂ ಹೆಚ್ಚು ಕೊವಿಡ್ ಪ್ರಕರಣಗಳು ವರದಿಯಾಗಿದ್ದು, 20,700 ಸೋಂಕಿತರಿಗೆ ಯಾವುದೇ ರೋಗ ಲಕ್ಷಣಗಳು ಕಂಡು ಬಂದಿಲ್ಲ. ಕಳೆದ 15 ದಿನಗಳಿಂದ ಲಾಕ್‌ಡೌನ್‌ಗೆ ಒಳಪಟ್ಟಿರುವ ಚೀನಾದ ವಾಣಿಜ್ಯ ನಗರಿ ಶಾಂಘೈನಲ್ಲಿ ಅತ್ಯಧಿಕ ಕೊವಿಡ್ ಕೇಸ್ ವರದಿಯಾಗಿವೆ..ಶಾಂಘೈನಲ್ಲಿ ಒಮಿಕ್ರಾನ್ ಆರ್ಭಟದ ನಡುವೆಯೇ ಆಹಾರ, ಔಷಧಿಗಳಿಲ್ಲದೇ ಜನರು ತೀವ್ರ ಸಂಕಷ್ಟಕ್ಕೊಳಗಾಗಿದ್ದಾರೆ. ಆಹಾರ, ಔಷಧಗಳ ಪೂರೈಕೆ ಮಾಡುವುದರ ಜೊತೆಗೆ ಸೋಂಕಿತರಿಗೆ ಸರಿಯಾದ ಚಿಕಿತ್ಸೆ ಕಲ್ಪಿಸುವಲ್ಲಿಯೂ ಸರ್ಕಾರ ವಿಫಲವಾಗಿದೆ. ಈ ಹಿನ್ನೆಲೆ ಜನರು ಸರ್ಕಾರದ ವಿರುದ್ಧ ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.