Webdunia - Bharat's app for daily news and videos

Install App

ಕೊರೊನಾ ರಣಕೇಕೆ ಹೈ ಅಲರ್ಟ್

Webdunia
ಸೋಮವಾರ, 3 ಜನವರಿ 2022 (14:08 IST)
ಕೋವಿಡ್ ಮೂರನೆ ಅಲೆಯ ಊಹಾಪೋಹಗಳ ನಡುವೆ ಕರ್ನಾಟಕದಲ್ಲಿ ಸೋಂಕಿನ ಪ್ರಮಾಣ ಶೇ.241ಪಟ್ಟು ಏರಿಕೆಯಾಗಿದ್ದು, ಮಹಾರಾಷ್ಟ್ರ, ನವದೆಹಲಿ, ಗುಜರಾತ್ ಸೇರಿ ಐದು ರಾಜ್ಯಗಳಲ್ಲಿ ಆತಂಕ ಸೃಷ್ಟಿಯಾಗಿದೆ.
 
ಕೇಂದ್ರ ಸರ್ಕಾರ ಮೇಲಿಂದ ಮೇಲೆ ರಾಜ್ಯ ಸರ್ಕಾರಗಳಿಗೆ ಪತ್ರಗಳನ್ನು ಬರೆದು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ನೀಡುತ್ತಲೇ ಇದೆ.
ಸೋಂಕು ಅಂಕೆ ಮೀರಿ ಏರಿಕೆಯಾಗುತ್ತಿದೆ. ಆತಂಕಕಾರಿ ಬೆಳವಣಿಗೆಯಲ್ಲಿ ಮಹಾರಾಷ್ಟ್ರ ದಲ್ಲಿ ಕೋವಿಡ್ ಸೋಂಕಿತರಿಗೆ ಆಮ್ಲಜನಕ ಪೂರೈಕೆ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
 
ದೇಶದ ಎಲ್ಲಾ ರಾಜ್ಯಗಳಿಗಿಂತಲೂ ಕರ್ನಾಟಕದಲ್ಲಿ ಸೋಂಕು ವೇಗವಾಗಿ ಹರಡಲಾರಂಭಿಸಿದೆ. ಭಾನುವಾರ 1,187 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 10,292ರಷ್ಟಾಗಿವೆ. ಬೆಂಗಳೂರು ನಗರವೊಂದರಲ್ಲೇ 8671 ದಾಖಲಾಗಿವೆ. ಹೊಸದಾಗಿ ಆರು ಸಾವುಗಳಾಗಿದ್ದು, ಅದರಲ್ಲಿ ಬೆಂಗಳೂರು ನಗರದಲ್ಲಿ ಮೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ತುಮಕೂರಿನಲ್ಲಿ ತಲಾ ಒಂದು ಪ್ರಕರಣಗಳು ದಾಖಲಾಗಿವೆ.
 
ಹೊಸ ಸೋಂಕಿನ ಪ್ರಕರಣಗಳ ಪೈಕಿ ಬೆಂಗಳೂರು ನಗರದಲ್ಲಿ 923, ದಕ್ಷಿಣ ಕನ್ನಡ ದಲ್ಲಿ 63, ಉಡುಪಿಯಲ್ಲಿ 54, ಮೈಸೂರಿ ನಲ್ಲಿ 20, ಬೆಳಗಾವಿಯಲ್ಲಿ 12, ತುಮಕೂರು, ಕೊಡಗು, ಮಂಡ್ಯ ಜಿಲ್ಲೆಯಲ್ಲಿ ತಲಾ 10 ಪ್ರಕರಣಗಳು ವರದಿಯಾಗಿವೆ. ಹಲವು ತಿಂಗಳಿಂದಲೂ ಶೇ.1ರ ಒಳಗೆ ನಿಯಂತ್ರಣ ದಲ್ಲಿದ್ದ ಸೋಂಕು, ನಿನ್ನೆ ಶೇ.1.08ರಷ್ಟಾಗಿದೆ. ಸಾವಿನ ಪ್ರಮಾಣವೂ ಶೇ.0.5ರಷ್ಟಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments