ಬೆಳಗಾವಿ : ಬೆಳಗಾವಿಯಲ್ಲಿ ಮೂವರಿಗೆ ಕೊರೊನಾ ಸೋಂಕು ವಿಚಾರ ಕೊರೊನಾ ಸೋಂಕಿತರನ್ನು ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿಟ್ಟಿಲ್ಲ ಎಂಬ ಆರೋಪ ಕೇಳಿಬಂದಿದೆ.
ಬೆಳಗಾವಿಯಲ್ಲಿ ಮೂವರಿಗೆ ಕೊರೊನಾ ಸೋಂಕು ಪತ್ತೆಯಾಗಿದೆ, ಆದರೆ ಅವರಿಗೆ ಪ್ರತ್ಯೇಕವಾಗಿಟ್ಟಿಲ್ಲ. ಎಲ್ಲರ ಜತೆಗೆ ಸೋಂಕಿತರು ಆಸ್ಪತ್ರೆಯ ಎಲ್ಲ ಕಡೆ ಓಡಾಡುತ್ತಿದ್ದಾರೆ. ಅಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಸಹ ನೀಡಿಲ್ಲವೆಂದು ಕೊರೊನಾ ನೆಗೆಟಿವ್ ಬಂದ ವ್ಯಕ್ತಿ ಆರೋಪಿಸಿ ವಿಡಿಯೋ ಮಾಡಿ ಹರಿಬಿಟ್ಟಿದ್ದಾನೆ, ಈ ವಿಡಿಯೋ ಇದೀಗ ವೈರಲ್ ಆಗಿದೆ.