ಬಟ್ಟೆ ವ್ಯಾಪಾರಿ ಹಾಗೂ ಸಕ್ಕರೆ ವ್ಯಾಪಾರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಹಾವೇರಿ ಜಿಲ್ಲೆಯಲ್ಲಿ ಹೊಸದಾಗಿ ಇಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ರಾಣೆಬೆನ್ನೂರಿನ ಬಟ್ಟೆ ವ್ಯಾಪಾರಿ ಹಾಗೂ ಶಿಗ್ಗಾಂವಿಯ ಸಕ್ಕರೆ ವ್ಯಾಪಾರಿ ಹಾಗೂ ಪಿಗ್ಮಿ ಏಜೆಂಟ್ಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಈವರೆಗೆ 43 ವ್ಯಕ್ತಿಗಳಿಗೆ ಸೋಂಕು ತಗಲಿದ್ದು, ಈ ಪೈಕಿ 24 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 19 ಪ್ರಕರಣಗಳು ಸಕ್ರಿಯವಾಗಿವೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಯೋಗೇಶ್ವರ ತಿಳಿಸಿದ್ದಾರೆ.
P-9411 ಹಾಗೂ P-9412 ಇಬ್ಬರಿಗೆ ಹೊಸದಾಗಿ ಪಾಸಿಟಿವ್ ಬಂದಿದೆ. ಬ್ಯಾಡಗಿಯ ಪೊಲೀಸ್ ಕಾನ್ಸ್ಟೇಬಲ್ (P-7030) ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.