ರಾಜ್ಯದ ಈ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ.
ಕೊರೋನಾ ಸೋಂಕಿನಿಂದ ಬೀದರ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗೊತ್ತಲಗಾಂವ ಗ್ರಾಮದ 55 ವರ್ಷದ ಪುರುಷ (P-10693) ಮೃತಪಟ್ಡಿದ್ದಾನೆ.
ವೈದ್ಯಕೀಯ ವರದಿಯಿಂದ ದೃಢವಾಗಿದ್ದು, ಇದರಿಂದ ಕೊರೋನಾ ಸೋಂಕಿಗೆ ಕಲಬುರಗಿ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.
ಜ್ವರ, ಉಸಿರಾಟ ತೊಂದರೆ ಹಾಗೂ ಅಸ್ತಮಾ ರೋಗದಿಂದ ಬಳಲುತ್ತಿದ್ದ ರೋಗಿಯು ಜೂನ್ 23 ರಂದು ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ದಾಖಲಾಗಿ ಜೂನ್ 24 ಕ್ಕೆ ನಿಧನ ಹೊಂದಿದ್ದಾರೆ.