Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, 211 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40 ಲಕ್ಷಕ್ಕೆ ಏರಿಕೆಯಾಗಿದೆ. ಇನ್ನು ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದು ಇದರೊಂದಿಗೆ ಸಾವಿನ ಸಂಖ್ಯೆ 40 ಸಾವಿರ ಆಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರಿನಲ್ಲಿ ಇಂದು 93 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18 ಲಕ್ಷಕ್ಕೆ ಏರಿಕೆಯಾಗಿದೆ. ರಾಜಧಾನಿಯಲ್ಲೂ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ. ರಾಜ್ಯದಲ್ಲಿ ಇಂದು 123 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.