Publish Date: Sun, 16 Jan 2022 (15:49 IST)
Updated Date: Sun, 16 Jan 2022 (15:47 IST)
ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ. ಹೀಗಾಗಿ, ಕರ್ನಾಟಕ ಸರ್ಕಾರ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಘೋಷಣೆ ಮಾಡಿದೆ. ವೀಕೆಂಡ್ ಕರ್ಫ್ಯೂಗೆ ಸಿಲಿಕಾನ್ ಸಿಟಿ ಬಹುತೇಕ ಸ್ತಬ್ಧವಾಗಿದೆ. ನಿನ್ನೆಯಿಂದ ಬೆಂಗಳೂರಿನ ಬಹುತೇಕ ರಸ್ತೆಗಳು ಬಿಕೋ ಎನ್ನುತ್ತಿವೆ.ಅನಗತ್ಯವಾಗಿ ಓಡಾಡುವವರ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು, ಶನಿವಾರ 600ಕ್ಕೂ ಹೆಚ್ಚು ವಾಹನಗಳನ್ನು ಸೀಜ್ ಮಾಡಲಾಗಿದೆ. ಜೊತೆಗೆ ಅಂತಹವರ ವಿರುದ್ಧ ಕೇಸ್ ದಾಖಲಿಸಿಕೊಳ್ಳಲಾಗಿದೆ.ವೀಕೆಂಡ್ ಕರ್ಫ್ಯೂಗೆ ಜನರಿಂದ ಉತ್ತಮ ಸ್ಪಂದನೆ ಹಿನ್ನೆಲೆಯಲ್ಲಿ ನಗರದಲ್ಲಿ ಹಲವು ಚೆಕ್ಪೋಸ್ಟ್ಗಳನ್ನು ಪೊಲೀಸರು ತೆರವುಗೊಳಿಸಿದ್ದಾರೆ. ಕೆಲವೆಡೆ ಬ್ಯಾರಿಕೇಡ್ ಇದ್ದರೂ ಪೊಲೀಸರಿಲ್ಲದಂತಾಗಿದೆ.