23 ವರ್ಷದ ಯುವತಿಯೊಬ್ಬಳಲ್ಲಿ ಕೊರೋನಾ ವೈರಸ್ ಪತ್ತೆಯಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಕಲಬುರಗಿ ಜಿಲ್ಲೆಯ ರೋಗಿ ಸಂಖ್ಯೆ-274ರ ನೇರ ಸಂಪರ್ಕದಲ್ಲಿ ಬಂದಿರುವ ಕಲಬುರಗಿ ನಗರದ 23 ವರ್ಷದ ಯುವತಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.
ಪ್ರಸ್ತುತ ಯುವತಿ ಇ.ಎಸ್.ಐ.ಸಿ. ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದರಿಂದ ಕಲಬುರಗಿ ಜಿಲ್ಲೆಯಲ್ಲಿ ಇದುವರೆಗೆ ಕೊರೊನಾ ಪಾಸಿಟಿವ್ ಪತ್ತೆಯಾದ ಸಂಖ್ಯೆ 18ಕ್ಕೆ ಏರಿದಂತಾಗಿದೆ. ಇದರಲ್ಲಿ ಮೂವರು ನಿಧನ ಹೊಂದಿದ್ದು, ಮೂವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.