Publish Date: Sat, 10 Oct 2020 (18:14 IST)
Updated Date: Sat, 10 Oct 2020 (18:17 IST)
ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿಗೆ ಕೊರೊನಾ ಕಾಣಿಸಿಕೊಂಡಿದೆ.
ತಮಗೆ ಕೊರೊನಾ ವೈರಸ್ ನ ಯಾವುದೇ ರೋಗ ಲಕ್ಷಣಗಳು ಇಲ್ಲ. ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾಗಿ ಎಂ ಎಲ್ ಸಿ ಎನ್.ರವಿಕುಮಾರ್ ತಿಳಿಸಿದ್ದಾರೆ.
ನಮಸ್ಕಾರಗಳು, ಆತ್ಮಿಯರೇ, ಇಂದು
#COVID19 ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದೆ. ಯಾವುದೇ ರೋಗ ಲಕ್ಷಣಗಳು ಇರುವುದಿಲ್ಲ. ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ಆಗಿದ್ದೇನೆ. ಚಿಕಿತ್ಸೆ ಕಾರಣ ನಿಮ್ಮ ಕರೆಗಳಿಗೆ ಸ್ಪಂದಿಸಲಾಗುತ್ತಿಲ್ಲ. ಕ್ಷಮೆ ಇರಲಿ.ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಚಿಕಿತ್ಸೆಗೆ ಒಳಪಡಬೇಕೆಂದು ವಿನಂತಿ. ಧನ್ಯವಾದಗಳು.
ಹೀಗಂತ ಎಂಎಲ್ ಸಿ ಎನ್.ರವಿಕುಮಾರ್ ಟ್ವಿಟ್ ಮಾಡಿದ್ದಾರೆ.