ಬೆಂಗಳೂರು : ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ತಗುಲಿರುವುದಾಗಿ ತಿಳಿದುಬಂದಿದೆ.
ನಿನ್ನೆ ರಾತ್ರಿ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಆ ವೇಳೆ ಕೊರೊನಾ ಟೆಸ್ಟ್ ಮಾಡಿಸಿದಾಗ ವರದಿಯಲ್ಲಿ ಪಾಸಿಟಿವ್ ಬಂದಿದೆ. ಈ ಬಗ್ಗೆ ಸಿದ್ದರಾಮಯ್ಯ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಈ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಬಿಬಿಎಂಪಿ ಸ್ಯಾನಿಟೈಸ್ ಮಾಡಿದೆ. ಹಾಗೇ ಸಿದ್ದರಾಮಯ್ಯ ಕುಟುಂಬದವರಿಗೂ ಕೊರೊನಾ ಟೆಸ್ಟ್ ಮಾಡಿಸಲಾಗಿದ್ದು, ಅವರ ಸಂಪರ್ಕದಲ್ಲಿದ್ದವರು ಕ್ವಾರಂಟೈನ್ ಆಗುವಂತೆ ಸೂಚಿಸಲಾಗಿದೆ. ಹಾಗೇ ಸಿದ್ದರಾಮಯ್ಯ ಅವರ ಹೆಲ್ತ್ ಬುಲೆಟಿನ್ ಬಿಡುಗಡೆಯಾಗಿದ್ದು, ಅವರ ಆರೋಗ್ಯ ಈಗ ಸ್ಥಿರವಾಗಿದೆ ಎಂಬುದಾಗಿ ತಿಳಿದುಬಂದಿದೆ.