ಮಹಾರಾಷ್ಟ್ರ ಪ್ರವಾಸ ಹಿನ್ನೆಲೆಯ 11 ಜನರಿಗೆ ಹೊಸದಾಗಿ ಕೊರೊನಾ ವೈರಸ್ ಕಾಣಿಸಿಕೊಂಡಿದೆ.
ಮಹಾರಾಷ್ಟ್ರ ಪ್ರವಾಸ ಮುಗಿಸಿ ಕಲಬುರಗಿ ಜಿಲ್ಲೆಯ ಸರಕಾರಿ ಕ್ವಾರಂಟೈನ್ ನಲ್ಲಿರುವ ಜನರಲ್ಲಿ 11 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಬಿ.ಶರತ್ ತಿಳಿಸಿದ್ದಾರೆ.
ಇದರೊಂದಿಗೆ ಕಲಬುರಗಿಯಲ್ಲಿ ರೋಗ ಪೀಡಿತರ ಸಂಖ್ಯೆ 780 ಕ್ಕೆ ಏರಿಕೆಯಾಗಿದ್ದು, 800 ರ ಗಡಿ ಸಮೀಪಿಸುತ್ತಿದೆ. 279 ಜನ ಇದುವರೆಗೂ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 8 ಜನರು ಕೊರೊನಾಗೆ ಬಲಿಯಾಗಿದ್ದಾರೆ. 493 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರಿದಿದೆ.